ರಿಯೊ ಡಿ ಜನೈರೋ, ಮೇ 7,ಬ್ರೆಜಿಲ್ ನಲ್ಲಿ ಕೊರೊನಾ ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 8,536 ಆಗಿದ್ದು, ಕಳೆದ 24 ಗಂಟೆಗಳಲ್ಲಿ 615 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಂದೇ ದಿನದಲ್ಲಿ ಸುಮಾರು 10,503 ಜನರಲ್ಲಿ ಕಾಣಿಸಿಕೊಂಡಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,25,218ಕ್ಕೆ ಏರಿಕೆ ಆಗಿದೆ ಎಂದು ಇಲಾಖೆ ತಿಳಿಸಿದೆ. ಈ ವರೆಗೆ ಕೊರೊನಾ ವಿರುದ್ಧ ಹೋರಾಡಿದ 51,370 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.