ಪುಣೆ, ಮಾ.29 , ಮಹಾರಾಷ್ಟ್ರದಲ್ಲಿ ಭಾನುವಾರ ಹೊಸದಾಗಿ ಮೂವರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 186ಕ್ಕೇರಿದೆ. ಆದಾಗ್ಯೂ, ಐವರು ಶಂಕಿತರ ರಕ್ತ ಮಾದರಿ ಪರೀಕ್ಷೆಯ ವರದಿ ಬಂದಿದ್ದು, ಅವರಲ್ಲಿ ಎಲ್ಲರ ವರದಿಗಳು ನೆಗೆಟಿವ್ ಆಗಿದೆ ಎಂಬುದು ಸಮಾಧಾನಕರ ವಿಷಯವಾಗಿದೆ. ಇಂದು ಅವರೆಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು ಎಂದು ಪಾಲಿಕೆ ಆಯುಕ್ತ ಶ್ರವಣ್ ಹರ್ದೀಕರ್ ತಿಳಿಸಿದ್ದಾರೆ.ಮಹಾರಾಷ್ಟ್ರದ ಪುಣೆ ಜಿಲ್ಲೆಯೊಂದರಲ್ಲೇ ಒಟ್ಟು 36 ಪ್ರಕರಣಗಳು ದಾಖಲಾಗಿದ್ದು, ಅವರಲ್ಲಿ 10 ಮಂದಿ ಈಗಾಗಲೇ ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರುದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1029ಕ್ಕೇರಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಅತಿಹೆಚ್ಚು ಸೋಂಕಿತರು ಇದ್ದಾರೆ.