ಮಂಗಳೂರು, ಮಾರ್ಚ್ 21, ಕೊವಿದ್ -19 ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು, ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆ ಸಂಪರ್ಕವನ್ನು ಮಾರ್ಚ್ 21 ರಿಂದ ಮಾರ್ಚ್ 31 ರ ಮಧ್ಯರಾತ್ರಿಯವರೆಗೆ ಮುಚ್ಚಲು ಆದೇಶಿಸಿದ್ದಾರೆ.ಕೇರಳದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಮತ್ತು ಜಿಲ್ಲೆಯ ನಡುವೆ ಯಾವುದೇ ವಾಹನಗಳು ಸಂಚರಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಶುಕ್ರವಾರ ತಡರಾತ್ರಿ ಆದೇಶದಲ್ಲಿ ತಿಳಿಸಿದ್ದಾರೆ.ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಂಗಳೂರು ನಗರದಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ತಲಪಾಡಿ ಚೆಕ್ ಪೋಸ್ಟ್ ಮೂಲಕ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಆರು ಕೊವಿದ್ -19 ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ‘ಜನತಾ ಕರ್ಫ್ಯೂ’ ಬೆಂಬಲಿಸಲು ದಕ್ಷಿಣ ಕನ್ನಡದ ಖಾಸಗಿ ಬಸ್ ಮಾಲೀಕರು ಮಾರ್ಚ್ 22 ರಂದು ಸೇವೆಯನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.