ಕೊವಿದ್‍ -19: ಕರ್ನಾಟಕದಲ್ಲಿ ಮತ್ತೊಂದು ಪ್ರಕರಣ ದೃಢ, ಒಟ್ಟು ಸಂಖ್ಯೆ 27ಕ್ಕೆ ಏರಿಕೆ

ಬೆಂಗಳೂರು, ಮಾರ್ಚ್ 23,  ಕೊರೊನಾವೈರಸ್ (ಕೊವಿದ್‍ -19) ಗೆ ಸೋಂಕು ಮತ್ತೊಬ್ಬ ವ್ಯಕ್ತಿಯಲ್ಲಿ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 27 ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸೋಮವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸೋಂಕು ತಡೆಗಟ್ಟಲು ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಮಾರಣಾಂತಿಕ ವೈರಸ್ ವಿರುದ್ಧದ ಹೋರಾಟಕ್ಕೆ ಆಧುನಿಕ ವೈದ್ಯಕೀಯ ಉಪಕರಣಗಳು ಮತ್ತು 10 ಲಕ್ಷ ಮುಖಗವಸುಗಳನ್ನು ನಿರ್ಧರಿಸಲಾಗಿದೆ ಎಂದು ಹೇಳಿದರು. ಜನರು ಸರ್ಕಾರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದ ಅವರು, ಜನರು ವೈರಸ್ ಹೊತ್ತು ಅದನ್ನು ಹರಡುವ ಅಪಾಯವಿರುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಮುಖಗವಸುಗಳಂತಹ ಅಗತ್ಯ ವಸ್ತುಗಳ ಅಕ್ರಮ ಮಾರಾಟದಲ್ಲಿ ತೊಡಗಿರುವವರು ಮತ್ತು ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್, ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಸರ್ಕಾರ ಲಾಕ್‍ಡೌನ್‍ ಘೋಷಿಸಿರುವುದರಿಂದ ಜನರು ತಮ್ಮ ಮನೆಗಳಿಂದ ಹೊರಬರಬಾರದು ಎಂದು ವಿನಂತಿಸಿದ್ದಾರೆ.ಸಚಿವರಾದ ಶ್ರೀರಾಮುಲು ಮತ್ತು ಅಶ್ವತ್ ನಾರಾಯಣ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.