ನವದೆಹಲಿ, ಏಪ್ರಿಲ್ 14,ಕೋವಿಡ್ -19 ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಮಂಗಳವಾರ ತನ್ನ ಎಲ್ಲಾ ಸೇವೆಗಳನ್ನು ಮೇ 3 ರವರೆಗೆ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.“… ಪ್ರೀಮಿಯಂ ರೈಲುಗಳು, ಮೇಲ್ / ಎಕ್ಸ್‌ಪ್ರೆಸ್ ರೈಲುಗಳು, ಪ್ರಯಾಣಿಕರ ರೈಲುಗಳು, ಉಪನಗರ ರೈಲುಗಳು, ಕೋಲ್ಕತಾ ಮೆಟ್ರೋ ರೈಲು, ಕೊಂಕಣ ರೈಲ್ವೆ ಇತ್ಯಾದಿಗಳು ಸೇರಿದಂತೆ ಭಾರತೀಯ ರೈಲ್ವೆಯ ಎಲ್ಲಾ ಪ್ರಯಾಣಿಕ ರೈಲು ಸೇವೆಗಳನ್ನು 2020 ರ ಮೇ 3ರ ರಾತ್ರಿ 12 ಗಂಟೆಗಳವರೆಗೆ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಆದಾಗ್ಯೂ, ದೇಶದ ವಿವಿಧ ಭಾಗಗಳಲ್ಲಿ ಅಗತ್ಯ ಸಾಮಗ್ರಿಗಳ ಸಾಗಣೆಗಾಗಿ, ಸರಕು ರೈಲುಗಳು ಮತ್ತು ಪಾರ್ಸೆಲ್ ರೈಲುಗಳ ಸೇವೆ ಮುಂದುವರಿಯುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರೈಲ್ವೆ ನಿಲ್ದಾಣಗಳು ಮತ್ತು ರೈಲ್ವೆ ನಿಲ್ದಾಣದ ಆವರಣದ ಹೊರಗಿನ ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ಪ್ರಯಾಣಕ್ಕಾಗಿ ರೈಲು ಪ್ರಯಾಣ ಟಿಕೆಟ್ ಕಾಯ್ದಿರಿಸುವ ಎಲ್ಲಾ ಕೌಂಟರ್‌ಗಳು ಮೇ 3 ರವರೆಗೆ ಮುಚ್ಚಲ್ಪಡುತ್ತವೆ.ನಾಗರಿಕ ವಿಮಾನಯಾನಕ್ಕೆ ಸಂಬಂಧಿಸಿದಂತೆ "ಎಲ್ಲಾ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳನ್ನು 3 ಮೇ 2020 ರ ರಾತ್ರಿ 11: 59 ರವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಡಿಜಿಸಿಎ ಟ್ವೀಟ್ ನಲ್ಲಿ ತಿಳಿಸಿದೆ. ಕೊರೊನಾವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆಯ ವಿರುದ್ಧ ಹೋರಾಡಲು ದೇಶಾದ್ಯಂತ ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದಕ್ಕೂ ಮೊದಲು ಏಪ್ರಿಲ್ 14 ರ ಮಧ್ಯರಾತ್ರಿಯವರೆಗೆ ಎಲ್ಲಾ ಸೇವೆಗಳನ್ನು ಮುಚ್ಚಲಾಗಿತ್ತು.ಮಂಗಳವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ, ಮುಂದಿನ ದಿನಗಳಲ್ಲಿ ವೈರಸ್ ಹೊಸ ಪ್ರದೇಶಗಳಿಗೆ ಹರಡದಂತೆ ನೋಡಿಕೊಳ್ಳಲು ಲಾಕ್‌ಡೌನ್ ಅನುಷ್ಠಾನವನ್ನು ಕಟ್ಟುನಿಟ್ಟಾಗಿ ಖಚಿತಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.ಹೊಸ ಲಾಕ್‌ಡೌನ್ ಅವಧಿಯ ಅನುಷ್ಠಾನದ ವಿವರವಾದ ಮಾರ್ಗಸೂಚಿಗಳನ್ನು ಬುಧವಾರ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.ಕೋವಿಡ್ 19 ಹಾಟ್‌ಸ್ಪಾಟ್‌ಗಳಲ್ಲಿ ಹೊಸದಾಗಿ ಯಾವುದೇ ಪ್ರಕರಣ ಕಂಡುಬಾರದಿದ್ದರೆ ಏಪ್ರಿಲ್ 20 ರ ನಂತರ ಆ ಪ್ರದೇಶಗಳಲ್ಲಿ ಕೆಲವೊಂದು ವಿನಾಯಿತಿಗಳನ್ನು ನೀಡಲಾಗುವುದು ಎಂದು ಮೋದಿ ಹೇಳಿದರು.ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಕನಿಷ್ಠ 10,363 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ಕನಿಷ್ಠ 339 ಜನರು ಪ್ರಾಣ ಕಳೆದುಕೊಂಡಿದ್ದಾರೆ. 1,036 ಸೋಂಕಿತರು ಗುಣಮುಖರಾಗಿದ್ದಾರೆ.