ಬೆಳಗಾವಿ, ಏ 12,ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ಮತ್ತೆ ನಾಲ್ವರಿಗೆ ಕೋವಿಡ್-೧೯ ಸೋಂಕು ದೃಢಪಟ್ಟಿದೆ. ಈ ನಾಲ್ಕು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ ೧೪ ಕ್ಕೆ ಏರಿದಂತಾಗಿದ್ದು, ಅತಿ ಹೆಚ್ಚು ಸೋಂಕು ಹೊಂದಿರುವ ಜಿಲ್ಲೆಗಳಲ್ಲಿ ಬೆಳಗಾವಿ ಮೂರನೇ ಸ್ಥಾನ ಪಡೆದಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಎಂದರೆ 76, ಮೈಸೂರಿನಲ್ಲಿ 48 ಪ್ರಕರಣಗಳು ಪತ್ತೆಯಾಗಿವೆ. ನಂತರ ಬೆಳಗಾವಿ, ನಾಲ್ಕನೇ ಸ್ಥಾದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಪ್ರಕರಣಗಳು ಕಂಡು ಬಂದಿವೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಮಾಹಿತಿ ಪ್ರಕಾರ ನಾಲ್ಕು ಜನರಲ್ಲಿ ಸೋಂಕು ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ೧೯ ವರ್ಷದ ಯುವಕ, ೫೫ ವರ್ಷದ ವ್ಯಕ್ತಿ, ೨೫ ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂವರೂ ಕೂಡ ಈಗಾಗಲೇ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಜತೆ ಸಂಪರ್ಕ ಹೊಂದಿದ್ದರು. ಅದೇ ರೀತಿ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೩೮ ವರ್ಷದ ವ್ಯಕ್ತಿಯಲ್ಲೂ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.