ತುಮಕೂರು, ಮೇ 2,ತುಮಕೂರು ಜಿಲ್ಲೆಯಲ್ಲಿ ಮೃತ ಪಿ-535 ಹಾಗೂ ಪಿ-553ರ ಸಂಪರ್ಕದಲ್ಲಿದ್ದ ಇಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್‌ಕುಮಾರ್ ತಿಳಿಸಿದ್ದಾರೆ. ಮೃತ ಪಿ-535 ಹಾಗೂ ಪಿ-553ರ ಪಕ್ಕದ ಮನೆಯವರಾದ ಗಂಡ-ಹೆಂಡತಿ ಇಬ್ಬರಿಗೂ ಸೋಂಕು ತಗುಲಿದ್ದು, ಅವರನ್ನು ಐಸೋಲೇಶನ್ ಮಾಡಲಾಗಿದೆ. ಇವರನ್ನು ಪಿ-591 ಹಾಗೂ ಪಿ-592 ಎಂದು ಗುರುತಿಸಲಾಗಿದೆ. ಜಿಲ್ಲೆಯು ಆರೇಂಜ್ ವಯಲದಲ್ಲಿರುವುದರಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಆದ್ದರಿಂದ ಮಕ್ಕಳು, ವಯಸ್ಸಾದವರು ಮನೆಯಿಂದ ಹೊರಗಡೆ ಹೋಗಬಾರದು. ಸಾರ್ವಜನಿಕರು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.