ಜಿಲ್ಲೆಯಲ್ಲಿ ಒಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢ
ವಿಜಯಪುರ ಜೂ.1 : ಜಿಲ್ಲೆಯಲ್ಲಿ ಇಂದು ಮತ್ತೆ ಒಬ್ಬರಿಗೆ ರೋಗಿ ಸಂಖ್ಯೆ -3250 (11 ವರ್ಷದ ಬಾಲಕ) ಮಹಾರಾಷ್ಟ್ರದ ಸಂಪರ್ಕದಿಂದ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈವರೆಗೆ 55 ಜನರು ಜಿಲ್ಲಾಸ್ಪತ್ರೆಯಿಂದ ಕೋವಿಡ್ ಪಾಸಿಟಿವ್ ರೋಗಿಗಳು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 27384 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 123 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. 7330 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 19,994 ಜನರು (1 ರಿಂದ 28 ದಿನಗಳ) ರಿಪೋಟರ್ಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 5 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 55 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 63 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ.
ಈವರೆಗೆ 24511 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 19396 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 4992 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಂದು 3 ಜನ ಕೋವಿಡ್ ಗುಣಮುಖ ರೋಗಿಗಳು ಬಿಡುಗಡೆ : ಜಿಲ್ಲಾಸ್ಪತ್ರೆಯಿಂದ ಇಂದು ರೋಗಿ ಸಂಖ್ಯೆ - 1176 (19 ವರ್ಷದ ಯುವತಿ) ರೋಗಿ ಸಂಖ್ಯೆ - 1661 (33 ವರ್ಷದ ಯುವಕ) ರೋಗಿ ಸಂಖ್ಯೆ -2205 (30 ವರ್ಷದ ಯುವತಿ) ಕೋವಿಡ್ ಪಾಸಿಟಿವ್ ಮೂರು ಜನ ರೋಗಿಗಳು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 