ಬೆಂಗಳೂರು, ಏ.15,ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 17 ಹೊಸ ಕೋವಿಡ್ -19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 277ಕ್ಕೆ ಏರಿದೆ. 75 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ನಾಗರೀಕರು ಮನೆಯಲ್ಲಿಯೇ ಸುರಕ್ಷಿತವಾಗಿ ಇರಬೇಕೆಂದು ಕಳಕಳಿಯ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.