ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಜಯಂತ್ಯೋತ್ಸ ಹಾಗೂ 23 ರಂದು ಪ್ರತಿಭಾ ಪುರಷ್ಕಾರ

ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಜಯಂತ್ಯೋತ್ಸ ಹಾಗೂ  23 ರಂದು ಪ್ರತಿಭಾ ಪುರಷ್ಕಾರ Krantiveera Sangolli Rayanna Jayanthi celebration and talent awards on the 23rd

ಲೋಕದರ್ಶನ ವರದಿ 

  ಸಿಂದಗಿ  21; ತಾಲೂಕಾ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ನೌಕರರ ಸಂಘದವತಿಯಿಂದ 23 ರಂದು ಪಟ್ಟಣದ ಗುಂದಗಿ ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಜಯಂತಿ ಹಾಗೂ ಪ್ರತಿಭಾ ಪುರಷ್ಕಾರ ಹಮ್ಮಿಕೊಳ್ಳಲಾಗಿದೆ ಕಾರಣ ಅಖಂಡ ತಾಲೂಕಿನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಾಜಪ ಮುಖಂಡ ಸಿದ್ದು ಬುಳ್ಳಾ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಜಯಂತಿ ಹಾಗೂ ಪ್ರತಿಭಾ ಪುರಷ್ಕಾರ ನಿಮಿತ್ಯ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸಂಗೋಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷ ರಾಯಣ್ಣ ಇವಣಗಿ ಮಾತನಾಡಿ, ಅಂದು ನಡೆಯುವ ಕಾರ್ಯಕ್ರಮದ ದಾರವಾಡ ರೇವಣಸಿದ್ದೇಶ್ಡರ ಮಠದಬಸವರಾಜ ದೇವರು ಮನಸೂರು, ಸರೂರ ಅಗತೀರ್ಥ ಶಾಖಾಮಠದ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು, ಗೊಳಸಾರ ಶ್ರೀ ಮಠದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು ಹಾಗೂ ಗುಬ್ಬೇವಾಡ ಸೋಮೇಶ್ವರ ಆಶ್ರಮದ ಕನ್ನಯ್ಯ ಮಹಾರಾಜರು, ಗೌರ.ಬಿ ಭಕ್ತಿಮಂದಿರದ ಅಭಿನವ ಯಲ್ಲಾಲಿಂಗ ಮಹಾರಾಜರ ಸಾನಿದ್ಯತೆಯಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.

ಶಾಸಕ ಅಶೋಕ ಮನಗೂಳಿ ಅವರು ಜ್ಯೋತಿ ಬೆಳಗಿಸುವವರು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರ​‍್ಪ, ಮಾಜಿ ಸಚಿವ ಬಂಡೆಪ್ಪ ಖಾಶಂಪೂರ ಪೋಟೋ ಪೂಜೆ ನೆರವೇರಿಸಲಿದ್ದಾರೆ. ಮಾಜಿ ಸಚಿವ ವರ್ತೂರ ಪ್ರಕಾಶ, ಮಾಜಿ ಶಾಸಕ ಶರಣಪ್ಪ ಸುಣಗಾರ ಪುಷ್ಪಾರ್ಚನೆ ಮಾಡಲಿದ್ದಾರೆ. ಮಾಜಿ ಶಸಕ ರಮೇಶ ಭೂಸನೂರ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಕರ್ನಾಟಕ ಮಹಿಳಾ ಆಯೋಗದ ಅದ್ಯಕ್ಷೆ ನಾಗರತ್ನ ಚೌಧರಿ, ಬೆಂಗಳೂರ ಇನ್ಸೈಟ್ ಐಎಎಸ್ ಅಕಾಡೆಮಿ ಸಂಸ್ಥಪಕರು ಹಾಗೂ ನಿರ್ದೇಶಕ ಜಿ.ಬಿ.ವಿನಯಕುಮಾರ ವಿಶೇಷ ಉಪನ್ಯಾಸ ನೀಡಲಿದ್ದಾರೆ, ಬೆಂಗಳೂರು ಕುವೆಂಪು ಬಾಷಾ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ, ತಹಶೀಲ್ದಾರ ಕರೇಪ್ಪ ಬೆಳ್ಳಿ,  ಕೆಕೆಆರ್‌.ಟಿ ವಿಬಾಗೀಯ ನಿವೃತ್ತ ನಿಯಾಂತ್ರಾಣಾಧಿಕಾರಿ ನಾರಾಯಣಪ್ಪ ಕುರುಬರ, ನಾಗಪ್ಪ ಶಿವೂರ ಸೇರಿದಂತೆ ಅನೇಕರು ಅತಿಥಿಗಳಾಗಿ ಆಗಮಿಸಲಿದ್ದಾರೆ.