ಮೂಲ ಸೌಕರ್ಯ ಕಾಮಗಾರಿ ಪರಿಶೀಲನೆಗೆ ಸಮಾಜ ಕಲ್ಯಾಣಾಧಿಕಾರಿಗಳಿಗೆ ಕೃಷ್ಣ ಬಾಜಪೇಯಿ ಸೂಚನೆ

ಹಾವೇರಿ:  ಲೋಕೋಪಯೋಗಿ, ನೀರಾವರಿ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲೋನಿಗಳಲ್ಲಿ ಕೈಗೊಳ್ಳುವ ಕಾಮಗಾರಿಗಳನ್ನು ಕಡ್ಡಾಯವಾಗಿ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಹಾಗೂ  ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಇಲಾಖೆಯಡಿ ಪರಿಶಿಷ್ಟರ ಕಲ್ಯಾಣಕ್ಕಾಗಿ ಕೋಟ್ಯಾಂತರ ರೂ. ಅನುದಾನ ಬಳಕೆಮಾಡಲಾಗುತ್ತಿದೆ. ನಿಯಮಾನುಸಾರ ಶೇ.40 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರು ವಾಸಿಸುವ ಕಾಲೋನಿಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳ ಕಾಮಗಾರಿ ಕೈಗೊಳ್ಳಬೇಕು. ಈ ನಿಯಮ ಕಡ್ಡಾಯವಾಗಿ ಅನುಷ್ಠಾನವಾಗಬೇಕು. ವಿವಿಧ ಇಲಾಖೆಗಳ ಕಾಮಗಾರಿ ಪುನಾವರ್ತನೆಯಾಗಬಾರದು. ಯಾವ ಕಾಲೋನಿಯಲ್ಲಿ ಯಾವ ಇಲಾಖೆ ಕಾರ್ಯನಿರ್ವಹಿಸಿದೆ ಎಂಬ ಮಾಹಿತಿ ಸಲ್ಲಿಸಬೇಕು. ಈ ಕುರಿತಂತೆ ಸಮಾಜ ಕಲ್ಯಾಣಾಧಿಕಾರಿಗಳು ಕಡ್ಡಾಯವಾಗಿ ಕಾಮಗಾರಿ ಪರಿಶೀಲಿಸಿ ದೃಡಿಕೃತ ವರದಿ ಸಲ್ಲಿಸಬೇಕು. ಪ್ರತಿ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳು ಕನಿಷ್ಠ 10 ಪಂಚಾಯತಿಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿ  ನಿಲಯಗಳ ಎಸ್ಸಿ  ಹಾಗೂ ಎಸ್.ಟಿ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಆಯೋಜಿಸಬೇಕು ಎಂದು ದೌರ್ಜನ್ಯ ಸಮಿತಿ ಸದಸ್ಯರು ಮನವಿ ಮಾಡಿಕೊಂಡರು. ಈ ಕುರಿತಂತೆ ಮಾಹಿತಿ ಒದಗಿಸಿದ ಸಮಾಜ ಕಲ್ಯಾಣಾಧಿಕಾರಿ ಫೆಬ್ರುವರಿಯಿಂದ ಈ ವರ್ಗದ ವಿದ್ಯಾರ್ಥಿ ಇಂಗ್ಲೀಷ್, ವಿಜ್ಞಾನ ಹಾಗೂ ಗಣಿತ ವಿಷಯಗಳಲ್ಲಿ ವಿಶೇಷ ತರಗತಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಹಾವೇರಿ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ನೆನೆಗುದಿಗೆ ಬಿದ್ದಿರುವ ಸವಣೂರ ಅಂಬೇಡ್ಕರ ಭವನದ ಆವರಣದ ಗೋಡೆಯ ಸಮಸ್ಯೆಯನ್ನು ಬಗೆಹರಿಸಿ ತ್ವರಿತವಾಗಿ ಪೂರ್ಣಗೊಳಿಸಬೇಕು. ಹಾವೇರಿಯಲ್ಲಿ ನಿಮರ್ಾಣಗೊಳ್ಳುತ್ತಿರುವ ಜಿಲ್ಲಾ ಅಂಬೇಡ್ಕರ ಭವನವನ್ನು 10 ದಿನದೊಳಗಾಗಿ ಪೂರ್ಣಗೊಳಿಸಬೇಕು. ಈ ವರ್ಷದ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿಯನ್ನು ಸಮಾಜದ ಮುಖಂಡರ ಆಶಯ ಹಾಗೂ ದೌರ್ಜನ್ಯ ಸಮಿತಿಯ ಸದಸ್ಯರ ಬೇಡಿಕೆಯಂತೆ ಭವನದಲ್ಲೇ ಆಚರಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಅಕ್ಕಿ ಆಲೂರಿನ ಸ್ಮಶಾನಭೂಮಿ ಖರೀದಿ, ಹಾನಗಲ್ ಅಂಬೇಡ್ಕರ ಉದ್ಯಾನವನಕ್ಕೆ ಕಾಯ್ದಿರಿಸಿದ ಜಮೀನಿಗೆ ಉತಾರ ನೀಡುವುದು, ನೆಗಳೂರ ಸ್ಮಶಾನಭೂಮಿಗೆ 15 ದಿನದಲ್ಲಿ ಸವರ್ೇ ಕಾರ್ಯ ಪೂರ್ಣಗೊಳಿಸುವುದು, ಈಚಲ ಯಲ್ಲಾಪುರದ ಗ್ರಾಮದ ಸ್ಮಶಾನಭೂಮಿಗೆ ಗಿಡ ನೆಡುವುದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ 24*10ರ ಅನುದಾನದಡಿ ಪೌರಕಾರ್ಮಿಕರಿಗೆ ಸೌಲಭ್ಯಗಳನ್ನು ಕಲ್ಪಿಸುವುದು, ಸವಣೂರು ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಕ್ಕೆ ನಿವೇಶನ ಮಂಜೂರಾತಿ ಹಾಗೂ ಬ್ಯಾಡಗಿ ನಗರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೂಲಿಕಾರ್ಮಿಕರಿಗೆ ಬ್ಯಾಂಕ್ನಿಂದ ನೆರವು ಒದಗಿಸಲು ಸ್ವ ಸಹಾಯ ಸಂಘ ರಚನೆಗೆ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಅವರು ಸಲಹೆ ನೀಡಿದರು.

ಏಳು ದಿನದಲ್ಲಿ ಪರಿಹಾರ: ದೌರ್ಜನ್ಯಕ್ಕೆ ಒಳಗಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಏಳು ದಿನದೊಳಗಾಗಿ ಪರಿಹಾರ ಪಾವತಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಫ್.ಐ.ಆರ್. ದಾಖಲಿಸಿ ತ್ವರಿತವಾಗಿ ಪೊಲೀಸ್ ಇಲಾಖೆಯಿಂದ ಸಂಬಂಧಿಸಿದವರಿಗೆ ಮಾಹಿತಿ ರವಾನಿಸಲು ಸಭೆಯಲ್ಲಿ ಚರ್ಚಿ ಸಲಾಯಿತು. ಈ ಕುರಿತಂತೆ ತ್ವರಿತವಾಗಿ ವಿಲೇವಾರಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ಸಭೆಗೆ ವಿವರಿಸಿದರು.

ಬೇಡ ಜಂಗಮ : ಜಿಲ್ಲೆಯಲ್ಲಿ ಬೇಡ ಜಂಗಮ ಜನಾಂಗದವರು ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆಯಲು ಅಜರ್ಿ ಸಲ್ಲಿಸುತ್ತಿದ್ದಾರೆ. ಇದರಿಂದ ನೈಜವಾದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯವಾಗುತ್ತಿದೆ. ಜಿಲ್ಲೆಯಲ್ಲಿ ಬೇಡ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡದಂತೆ ದೌರ್ಜನ್ಯ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕರಾದ ಶ್ರೀಮತಿ ಚೈತ್ರಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಾ.ರಾಜು ಕೂಲೇರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ವಾತರ್ಾಧಿಕಾರಿ ಬಿ.ಆರ್.ರಂಗನಾಥ್, ಜಿಲ್ಲಾ ಪಂಚಾಯತ್ ಯೋಜನೆ ಮತ್ತು ಸಾಂಖಿಕ ಅಧಿಕಾರಿ ಕುಮಾರ್ ಮಣ್ಣವಡ್ಡರ, ರಾಣೇಬೆನ್ನೂರ ತಹಶೀಲ್ದಾರ ಬಸವನಗೌಡ, ನಿಮರ್ಿತಿ ಕೇಂದ್ರದ ಯೋಜನಾಧಿಕಾರಿ ತಿಮ್ಮೇಶ್, ಕೆ.ಆರ್.ಡಿ.ಎಲ್. ಇಂಜನೀಯರ್ ಪಾಟೀಲ, ವಿವಿಧ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ನಗರಾಭಿವೃದ್ಧಿ ಕೋಶದ ಅಧಿಕಾರಿಗಳು, ಪುರಸಭೆ, ನಗರಸಭೆ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ದೌರ್ಜನ್ಯ ಸಮಿತಿ ಅಧಿಕಾರೇತರ ಸದಸ್ಯರು ಉಪಸ್ಥಿತರಿದ್ದರು.