ಜೆ.ಎಸ್‌.ಎಸ್‌. ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಜೆ.ಎಸ್‌.ಎಸ್‌. ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ  Krishna Janmashtami Celebration at JSS Kannada Medium High School

ಲೋಕದರ್ಶನ ವರದಿ  

ಧಾರವಾಡ, ಸೆ. 3: ನಗರದ ವಿದ್ಯಾಗಿರಿಯ ಜೆ.ಎಸ್‌.ಎಸ್‌. ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತುಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್ ಹಾಗೂ ಎಲ್‌ಐಟಿ ಕಾಲೇಜಿನ ಪ್ರಾಂಶುಪಾಲ ಶ್ರೀ ಮಹಾವೀರ ಉಪಾಧ್ಯೆ ಅವರು ಆಗಮಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.  

ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಶ್ರೀಕೃಷ್ಣನ ಬಾಲ್ಯಲೀಲೆಗಳನ್ನು ಬಿಂಬಿಸುವ ವಿವಿಧ ಸನ್ನಿವೇಶಗಳನ್ನು ಮಕ್ಕಳಿಂದ ಪ್ರದರ್ಶಿಸಲಾಯಿತು. ಕಾಳಿಂಗಮರ್ಧನ ಹಾಗೂ ಗೋವರ್ಧನಗಿರಿಯನ್ನು ಕಿರುಬೆರಳಿನಲ್ಲಿ ಎತ್ತಿಹಿಡಿದ ಕೃಷ್ಣನ ದೃಶ್ಯಗಳನ್ನು ಮನೋಜ್ಞವಾಗಿ ಪ್ರಸ್ತುತಪಡಿಸಲಾಯಿತು.  

ಅನೇಕ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯ ವೇಷಭೂಷಣ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮ ಹೆಚ್ಚಿಸಿದರು. ಮುಖ್ಯ ಗುರುಗಳು, ಶಿಕ್ಷಕ ವೃಂದ ಹಾಗೂ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.  ಮುಖ್ಯ ಗುರುಗಳಾದ ಶ್ರೀಮತಿ ಮೈನಾ ವತಿ ದಿವಟೆ ಅವರು ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿದರು.