ಕೃಷ್ಣಾ ಮೇಲ್ದಂಡೆ ಯೋಜನೆ ಹಂತ ಹಂತವಾಗಿ ಪೂರ್ಣ : ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

Krishna Upper Bank Project completed step by step: Deputy Chief Minister D. K. Shivakumar

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ ಹಂತವಾಗಿ  ಪೂರ್ಣ : ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ 

       ಸುವರ್ಣಸೌಧ 19: ಕೃಷ್ಣಾ   ಮೇಲ್ದಂಡೆ ಯೋಜನೆಗೆ ಸರ್ಕಾರವು ನೀಡಿರುವ ಆಡಳಿತಾತ್ಮಕ ಅನುಮೋದನೆ ಮೇರೆಗೆ, ಅನುದಾನ ಲಭ್ಯತೆ ಅನುಸಾರ ಸೂಕ್ತ ಅನುದಾನ ಒದಗಿಸಿ, ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. 

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಪಿ. ಹೆಚ್‌. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1್ಘ2ರ ಯೋಜನೆಯನ್ನು ಪೂರ್ಣಗೊಳಿಸಲಾಗಿದ್ದು,  ಹಂತ-3ರ ಯೋಜನೆಯನ್ನು ಪರಿಷ್ಕೃತ ಅನುಮೋದಿತ ಅಂದಾಜು ಮೊತ್ತ ರೂ.51,148.94 ಕೋಟಿ (2014-15ನೇ ಸಾಲಿನ ದರಪಟ್ಟಿಯಂತೆ)ಗೆ  ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇಲ್ಲಿಯವರೆಗೆ ರೂ.18,307.33 ಕೋಟಿ ವೆಚ್ಚ ಮಾಡಲಾಗಿರುತ್ತದೆ. ಅನುಮೋದಿತ ಯೋಜನಾ ಮೊತ್ತದನ್ವಯ ಬಾಕಿ ಉಳಿದ ಮೊತ್ತ ರೂ.32,841.61 ಕೋಟಿ ಆಗಿರುತ್ತದೆ ಎಂದು ತಿಳಿಸಿದರು. 


ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1್ಘ2ರಲ್ಲಿ ಮುಳುಗಡೆಯಾದ ಜಮೀನು 1,75,470 ಎಕರೆ ಕ್ಷೇತ್ರಕ್ಕೆ ಮತ್ತು ಮುಳುಗಡೆಯಾದ 78,854 ಕಟ್ಟಡಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. 

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ಮುಳುಗಡೆಯಾಗುವ ಜಮೀನು 75,563 ಎಕರೆ ಮತ್ತು ಮುಳುಗಡೆಯಾಗಲಿರುವ 25,660 ಕಟ್ಟಡಗಳ ಪರಿಹಾರಕ್ಕಾಗಿ ರೂ.17,627.00 ಕೋಟಿಗಳ ಅನುಮೋದಿತ ಮೊತ್ತದಲ್ಲಿ, ಇಲ್ಲಿಯವರೆಗೆ ರೂ.3,734.53 ಕೋಟಿ ಮೊತ್ತ ಪರಿಹಾರ ನೀಡಲಾಗಿದ್ದು,ಬಾಕಿ ಉಳಿದ ಮೊತ್ತ ರೂ.13,892.47 ಕೋಟಿ ಆಗಿರುತ್ತದೆ ಎಂದರು. 

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ರಾಜ್ಯಕ್ಕೆ ಹಂಚಿಕೆಯಾದ 130 ಟಿಎಂಸಿ ನೀರಿನ ಬಳಕೆಯು ಕೇಂದ್ರ ಸರ್ಕಾರದಿಂದ ಹೊರಡಿಸುವ ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ​‍್ಿನ ಅಧಿಸೂಚನೆಗೆ  ಒಳಪಟ್ಟಿರುತ್ತದೆ. ನ್ಯಾಯಾಧಿಕರಣ-2ರ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಕಣಿವೆ ರಾಜ್ಯಗಳ ದಾಖಲಿಸಿರುವ ವ್ಯಾಜ್ಯಗಳು ಇತ್ಯರ್ಥಕ್ಕೆ ಬಾಕಿ ಇದ್ದು, ನ್ಯಾಯಾಧೀಕರಣ ತೀರ​‍್ಿನ ಗೆಜೆಟ್ ಅಧಿಸೂಚನೆಗೆ ರಾಜ್ಯ ಸರ್ಕಾರದಿಂದ ನಿರಂತರವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು. 

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್  ಶಾಖಾ ಕಚೇರಿಯನ್ನು ಮದ್ದೂರು ಪಟ್ಟಣದಲ್ಲಿ ಸ್ಥಾಪಿಸುವ ಪ್ರಸ್ತಾವನೆ ಪರೀಶೀಲನೆಯಲ್ಲಿದೆ: ಡಿ.ಕೆ.ಶಿವಕುಮಾರ 

       ಸುವರ್ಣಸೌಧ 19: ಬೆಂಗಳೂರ -ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರದ ಶಾಖಾ ಕಚೇರಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರೀಶೀಲನೆಯಲ್ಲಿದೆ ಎಂದು ಉಪ ಮುಖ್ಯಮಂತ್ರಿಗಳಾದ  

ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. 

ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಉಪ ಮುಖ್ಯಮಂತ್ರಿಗಳು,  

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನಾ ಪ್ರಾಧಿಕಾರ (ಬಿ.ಎಂ.ಐ.ಸಿ.ಎ.ಪಿ.ಎ) ವ್ಯಾಪ್ತಿಗೆ ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಗೆ 2001ನೇ ಸಾಲಿನಲ್ಲಿ ಸೇರೆ​‍್ಡಯಾಗಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. 

ನೀರನ್ನು ಪಡೆಯಲು ಕ್ರಮ: 

ಭೀಮಾ ಮುಖ್ಯ ನದಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನೀರನ್ನು ಬಳಸಿಕೊಳ್ಳಲು ನಿಭಂರ್ದವಿದ್ದು, ಮಿತಿಗೊಳಿಸಿರುವ ಪ್ರಮಾಣದಲ್ಲಿ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಸಾಮಾನ್ಯ ವರ್ಷಗಳಲ್ಲಿ ನೀರಿನ ಕೊರತೆ ಕಂಡುಬಂದಿರುವುದಿಲ್ಲ. ಕೊರತೆಯಾದ ಜಲ ವರ್ಷಗಳಲ್ಲಿ ಕುಡಿಯುವ ಹಾಗೂ ಇತರೆ ಅಗತ್ಯಗಳಿಗೆ ನೀರನ್ನು ಮಹಾರಾಷ್ಟ್ರ ರಾಜ್ಯದಿಂದ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು, ಸದಸ್ಯರಾದ ಡಾ.ತಳವಾರ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ್ದಾರೆ. 

ಬಚಾವತ್ ತೀರ​‍್ಿನ ಪ್ರಕಾರ ನ್ಯಾಯಯುತವಾಗಿ ರಾಜ್ಯಕ್ಕೆ ಬರಬೇಕಾದ ನೀರನ್ನು ಪಡೆಯಲು ಸರ್ಕಾರ ಪ್ರಯತ್ನಿಸಿದೆ ಎಂದು ಅವರು ವಿವರಿಸಿದ್ದಾರೆ.