ನ್ಯಾಯಬೆಲೆ ಅಂಗಡಿ ಮಾಲೀಕರ ಬಿಲ್ಲು ಪಾವತಿಗೆ ಕೃಷ್ಣಪ್ಪ ಒತ್ತಾಯ

ಕೊಪ್ಪಳ 31: ಜಿಲ್ಲೆಯ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಸಾರ್ವಜನಿಕರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಿದ ಬಾಬತ್ತಿನ ಬಿಲ್ಲು ನ್ಯಾಯಯುತವಾಗಿ ಸಿಗಬೇಕಾದ ಕಮಿಷನ್ ಹಣ ನೀಡುವಲ್ಲಿ ಆಹಾರ ಇಲಾಖೆ ನಿರ್ಲಕ್ಷ ಮತ್ತು ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಆರೋಪಿಸಿ ಕೂಡಲೇ ಹಣ ಪಾವತಿ ಮಾಡುವಂತೆ ಜಿಲ್ಲೆಯ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಮತ್ತು ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ಕೃಷ್ಣಪ್ಪ ಕೆ ,ಕೆ ,ರವರು ಒತ್ತಾಯಿಸಿದ್ದಾರೆ. 

ಈ ಕುರಿತು ಹೇಳಿಕೆ ನೀಡಿದ ಅವರು ಆಹಾರ ಇಲಾಖೆಯ ಅಧಿಕಾರಿಗಳು ಅನಾವಶ್ಯಕವಾಗಿ ಸರ್ಕಾರಿ ಪಡಿತರ ವಿತರಕರಿಗೆ ನ್ಯಾಯಬೆಲೆ ಅಂಗಡಿಯ ಮಾಲೀಕರಿಗೆ ನಿರ್ಲಕ್ಷ್ಯ ಮಾಡುತ್ತಿದೆ ನೀಡಬೇಕಾದ ಹಣ ಕೂಡಲೇ ಪಾವತಿ ಮಾಡಬೇಕು, ದೀಪಾವಳಿ ಹಬ್ಬ ಬರುತ್ತಿದೆ ನ್ಯಾಯಬೆಲೆ ಅಂಗಡಿಯ ಮಾಲೀಕರು ಹೇಗೆ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು ಬಿಲ್ಪಾವತಿ ಮಾಡದೆ ಹಬ್ಬದ ಶುಭಾಶಯಗಳು ಸಹ ನಮಗೆ ತಿಳಿಸುಕೂಡದು ಎಂದು ತಿಳಿಸಿದ್ದಾರೆ, ಅಲ್ಲದೆ ತ್ವರಿತ ಗತಿಯಲ್ಲಿ ನ್ಯಾಯಬೆಲೆ ಅಂಗಡಿಯ ಮಾಲೀಕರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ ನಮಗೆ ಸಿಗಬೇಕಾದ ಮತ್ತು ಬರಬೇಕಾದ ನ್ಯಾಯಯುತ ಕಮಿಷನ್ ಹಣ ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ಬರುವ ನವಂಬರ್ 5 ರಂದು ಕೊಪ್ಪಳ ಜಿಲ್ಲೆಗೆ ಭೇಟಿ ಮಾಡಿ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಯ ಮಾಲೀಕರೊಂದಿಗೆ ಇಲಾಖೆಯ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ಕೃಷ್ಣಪ್ಪ ಕೆ ,ಕೆ ,ರವರು ಎಚ್ಚರಿಸಿದ್ದಾರೆ.