ಹಾವೇರಿ ಜಿಲ್ಲೆಗೆ ಸಚಿವ ಸ್ಥಾನಕ್ಕಾಗಿ ಕ್ಷತ್ರಿಯ ಒಕ್ಕೂಟದ ಹೋರಾಟ
Kshatriya alliance fights for ministerial post in Haveri district
ಹಾವೇರಿ 18 : ಜಿಲ್ಲೆಯ ಕ್ಷತ್ರಿಯ ಸಮಾಜದ ಶಾಸಕರುಗಳಾದ ರುದ್ರ್ಪ ಲಮಾಣಿ ಹಾಗೂ ಶ್ರೀನಿವಾಸ ಮಾನೆ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಹಾವೇರಿ ಜಿಲ್ಲಾ ಕ್ಷತ್ರಿಯ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷರಾದ ನಾಗರಾಜ ಜೋರಾಪುರಿ ಒತ್ತಾಯಿಸಿದರು. ನಗರದ ಪತ್ರಿಕೆ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹಾವೇರಿ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಲಿ ಸಭಾಧ್ಯಕ್ಷರಾದ ರುದ್ರ್ಪ ಲಮಾಣಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಲಂಬಾಣಿ ಸಮಾಜದ ಏಕೈಕ ಶಾಸಕರಾಗಿದ್ದಾರೆ. ಈ ಹಿಂದೆ ಸಚಿವರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ರಾಜ್ಯದಲ್ಲಿ ಸೇವೆ ಮಾಡಲು ರುದ್ರ್ಪ ಲಮಾಣಿ ಅವರಿಗೆ ಕಾಂಗ್ರೆಸ್ ಪಕ್ಷ ಸಚಿವರನ್ನಾಗಿ ಮಾಡಬೇಕು. ಅದರಂತೆ ಹಾನಗಲ್ ಕ್ಷೇತ್ರದ ಕ್ರಿಯಾಶೀಲ ಶಾಸಕರಾದ ಶ್ರೀನಿವಾಸ ಮಾನೆ ಅವರು ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 