ಕುಲಗುರು ಮಡಿವಾಳ ಮಾಚಿದೇವ ಜಯಂತಿ
Kulguru Madiwala Machideva Jayanti
ಕುಲಗುರು ಮಡಿವಾಳ ಮಾಚಿದೇವ ಜಯಂತಿ
ಹಾವೇರಿ 01: ಕುಲಗುರು ಶ್ರೀ ಮಡಿವಾಳ ಮಾಚಿದೇವರ ತತ್ವಾದರ್ಶಗಳು ಎಲ್ಲರಿಗೂ ದಾರೀದೀಪವಾಗಿವೆ. ಇಂದಿನ ಯುವ ಸಮೂಹ ಅವರ ಜೀವನದ ಕುರಿತು ತಿಳಿದುಕೊಳ್ಳಬೇಕು ಎಂದು ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಮಾನಪ್ಪ ಲಮಾಣಿ ಅವರು ಹೇಳಿದರು.
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಟಿ.ಎಂ.ಎ.ಇ.ಎಸ್. ಬಿ.ಇಡಿ. ಕಾಲೇಜ್ ಹಾಗೂ ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಜರುಗಿದ ಕುಲಗುರು ಶ್ರೀ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತ ಪ್ರಾಚಾರ್ಯ ಪ್ರೊ.ಬಿ.ಎಸ್.ಯಾವಗಲ್ ಅವರು ಕುಲಗುರು ಶ್ರೀ ಮಡಿವಾಳ ಮಾಚಿದೇವರ ಜೀವನದ ಕುರಿತು ಉಪನ್ಯಾಸ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜು ಸಾತೇನಹಳ್ಳಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಮೈದೂರ, ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಉಪ ವಿಭಾಗಾಧಿಕಾರಿ ಚೆನ್ನಪ್ಪ, ತಹಶೀಲ್ದಾರ ಶರಣಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಟಿ.ಎಂ.ಎ.ಇ.ಎಸ್. ಬಿ.ಇಡಿ. ಕಾಲೇಜ್ ಪ್ರಾಚಾರ್ಯ ಡಾ.ಬಸನಗೌಡ್ರ, ಹಾವೇರಿ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ ಮಡಿವಾಳರ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 