ಲಾಕ್ಡೌನ್ ಸಮಸ್ಯೆ ಸಿಲುಕಿದವರಿಗಾಗಿ ‘ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ ಕುಮಾರಸ್ವಾಮಿ
ಬೆಂಗಳೂರು, ಏ.1,ಲಾಕ್ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು 'ಎಚ್ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ. ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ. ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 