ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿಕುಮಾರಿ ಹರಿಣಿ ದೊಡ್ಡಮನಿಗೆ ಅತ್ಯುನ್ನತ ಶ್ರೇಣಿ
Kumari Harini Doddamani gets the highest rank in the Second PUC Science Examination
ಕೊಪ್ಪಳ 09 : ಜಿಲ್ಲೆಯ ಗಂಗಾವತಿ ನಗರದ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಕಾಲೇಜಿ ನಲ್ಲಿ ಪಿಯುಸಿ ದ್ವಿತೀಯ ವಿಜ್ಞಾನ ಪ್ರಸಕ್ತ ಸಾಲಿನ ಪರೀಕ್ಷೆ ಯಲ್ಲಿ 600 ಕ್ಕೆ 580 ಅಂಕ ಪಡೆದು ಶೇಕಡ 96.66 ಅಂಕಗಳಿಸಿ ಅತ್ಯುನ್ನತ ಶ್ರೇಣಿ (ಡಿಸ್ಟಿಂಕ್ಷನ್) ಫಲಿತಾಂಶ ಪಡೆದು ಕಾಲೇಜಿಗೆ ಜಿಲ್ಲೆಗೆ ಮತ್ತು ಕೊಪ್ಪಳದ ದೊಡ್ಡಮನಿ ಕುಟುಂಬಕ್ಕೆ ಕೀರ್ತಿ ತರುವಲ್ಲಿ ಯಶಸ್ವಿಯಾಗಿದ್ದಾಳೆ, ಕುಮಾರಿ ಹರಿಣಿ ದೊಡ್ಡಮನಿಯವರು ಕೊಪ್ಪಳದ ಹಿರಿಯ ಪತ್ರಕರ್ತ ಕೋಟೆ ಕದಂಬ ದಿನ ಪತ್ರಿಕೆಯ ಸಂಪಾದಕ ಎನ್ ಎಂ ದೊಡ್ಡಮನಿ ಯವರ ಜೇಷ್ಠ ಸುಪುತ್ರಿಯಾಗಿದ್ದು ಸದರಿ ವಿದ್ಯಾರ್ಥಿನಿ ಕೊಪ್ಪಳ ನಗರದ ಶ್ರೀ ಬಸವೇಶ್ವರ ನಗರದ ನಿವಾಸಿಯಾಗಿದ್ದು ತನ್ನ ಎಸ್‌ಎಸ್‌ಎಲ್ಸಿ ವಿದ್ಯಾಭ್ಯಾಸ ಟ್ರಿನಿಟಿ ಪಬ್ಲಿಕ್ ಶಾಲೆಯಲ್ಲಿ ಪಡೆದು ಅಲ್ಲಿಯೂ ಕೂಡ ಉನ್ನತ ಶ್ರೇಣಿಯಲ್ಲಿ ಪಾಸಾಗಿ ನಂತರ ಪಿಯುಸಿ ಪ್ರಥಮ ಮತ್ತು ದ್ವಿತೀಯ ವಿಜ್ಞಾನ ವ್ಯಾಸಂಗದ ವಿದ್ಯಾಭ್ಯಾಸವನ್ನು ಗಂಗಾವತಿ ನಗರದ ಶ್ರೀ ವಿದ್ಯಾನಿಕೇತನ ಕಾಲೇಜಿನಲ್ಲಿ ಪೂರೈಸಿ ಪ್ರಸಕ್ತ ಸಾಲಿನಲ್ಲಿ ಪಿಯುಸಿ ವಿಜ್ಞಾನ ದ್ವಿತೀಯ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳಿಸಿ ಗಣನೀಯ ಸಾಧನೆ ಮಾಡಿ ಕೀರ್ತಿ ತರುವಲ್ಲಿ ಯಶಸ್ವಿ ಯಾಗಿರುವ ಸದರಿ ವಿದ್ಯಾರ್ಥಿನಿಯ ಸಾಧನೆಗೆ ಕೊಪ್ಪಳ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಪತ್ರಕರ್ತರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ ಉತ್ತಮ ವ್ಯಾಸಂಗ ಮಾಡಿ ಉನ್ನತ ಮಟ್ಟದ ಸ್ಥಾನವನ್ನು ಅಲಂಕರಿಸಿ ಜಿಲ್ಲೆಗೆ ಮತ್ತು ಈ ನಾಡಿಗೆ ಕೀರ್ತಿ ತರುವಂತಾಗಲಿ ಎಂದು ಹಲವರು ಶುಭ ಹಾರೈಸಿದ್ದಾರೆ,
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 