ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದ ವೇಳೆ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆ ಬೆಳಗಾವಿಗರ ಪಾಲಿಗೆ ಆ ಕುಂಭಮೇಳವು ಅಕ್ಷರಶಃ ಕರಾಳ ದಿನವಾಗಿ ಮಾರ್ಪಟ್ಟಿದೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಈ ಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ(50), ಹಾಗೂ ಮೇಘಾ ಹತ್ತರವಾಠ, ಶೆಟ್ಟಿ ಗಲ್ಲಿಯ ನಿವಾಸಿ ಅರುಣ್ ಕೋರ್ಪಡೆ, ಮತ್ತು ಶಿವಾಜಿನಗರ ನಿವಾಸಿ ಮಹಾದೇವಿ ಬಾವನೂರ ಈ ನಾಲ್ವರು ಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಪ್ರಯಾಗ್ ರಾಜ್ ನ ಕುಂಭಮೇಳದ ಕಾಲ್ತುಳಿತ ದುರ್ಘಟನೆಯಲ್ಲಿ ಬೆಳಗಾವಿ ಮೂಲದ ಇನ್ನೂ ಹಲವಾರು ಜನ ಕಾಣೆಯಾಗಿದ್ದು ಸಧ್ಯ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇನ್ನೂಳಿದವರ ಪತ್ತೆಹಚ್ವಬೇಕಾಗಿದೆ.