ಕುಂದಾಪುರ: ದೇವಸ್ಥಾನದಲ್ಲಿ 10 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣ ಕಳವು
ಕುಂದಾಪುರ, ಫೆ 27, ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬದಕೆರೆಯ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ ಬುಧವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ ಕಳೆದ ಎರಡು ತಿಂಗಳಲ್ಲಿ ವರದಿಯಾದ ನಾಲ್ಕನೇ ಘಟನೆ ಇದಾಗಿದೆ. ಕಳ್ಳರು ದೇವಾಲಯದ ಬೆಳ್ಳಿ ಬಾಗಿಲಿನ ಚೌಕಟ್ಟು ಮತ್ತು ಇತರ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ದೇವಾಲಯದಲ್ಲಿ ಅಳವಡಿಸಲಾದ 50,000 ರೂ ಮೌಲ್ಯದ ಸಿಸಿಟಿವಿ ಡಿವಿಆರ್ ಮತ್ತು ಎಲ್ಇಡಿ ಟಿವಿ ಸಹ ಕಾಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 