ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ಕುರುಬರ ಸಂಘದಿಂದ ಆಕ್ರೋಶ
Kuruba Sangha expresses outrage over the removal of Siddaramaiah's statue
ಲೋಕದರ್ಶನ ವರದಿ
ವಿಜಯನಗರ, ಸೆ.25: ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ತೆರವುಗೊಳಿಸಿರುವ ಘಟನೆಯನ್ನು ವಿಜಯನಗರ ಜಿಲ್ಲಾ ಕುರುಬರ ಸಂಘ ತೀವ್ರವಾಗಿ ಖಂಡಿಸಿದೆ.
ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದು, ಬಡವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪರವಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ರಾಜ್ಯದ ಬಡವರು ಹಾಗೂ ಮಹಿಳೆಯರಿಗಾಗಿ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಆದರ್ಶ ವ್ಯಕ್ತಿಯ ಪ್ರತಿಮೆಯನ್ನು ತೆರವುಗೊಳಿಸಿರುವುದು ಖಂಡನೀಯ ಎಂದು ಸಂಘ ತಿಳಿಸಿದೆ.
ಪ್ರತಿಮೆ ತೆರವುಗೊಳಿಸಿದ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವರನ್ನು ಅಮಾನತುಗೊಳಿಸಬೇಕು. ಅಲ್ಲದೆ, ತೆರವುಗೊಳಿಸಿದ ಅದೇ ಸ್ಥಳದಲ್ಲಿ ಪ್ರತಿಮೆಯನ್ನು ಪುನಃ ಪ್ರತಿಷ್ಠಾಪಿಸಬೇಕು ಎಂದು ಸಂಘ ಆಗ್ರಹಿಸಿದೆ. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಕುರುಬ ಸಮಾಜ ಹಾಗೂ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಆರ್.ಕೆ. ಕೋಟ್ರೇಶ್, ಪ್ರಧಾನ ಕಾರ್ಯದರ್ಶಿ ಎಚ್. ಮಹೇಶ್, ವಕೀಲರು, ಖಜಾಂಚಿ ಶಿವಮೂರ್ತಿ ಕೆ., ಗ್ಯಾರಂಟಿ ಯೋಜನಾ ಜಿಲ್ಲಾಧ್ಯಕ್ಷ ಗೌಡ್ರು ರಾಮಣ್ಣ, ಗುಡ್ರಿ ಬಸವರಾಜ್, ಕಾರ್ಯದರ್ಶಿ ಕುಬೇರದಲಾಳ್ಳಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 