ಲೋಕದರ್ಶನ ವರದಿ
ಕುರುಗೋಡು 13: ಸಮೀಪದ ಯಲ್ಲಾಪುರ ಗ್ರಾಮದ 9ನೇ ತರಗತಿ ವಿದ್ಯಾಥರ್ಿನಿ ಕೆ.ಎಂ.ನೇತ್ರಾವತಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ -2020 ನೇರ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು, ಗ್ರಾಮದಲ್ಲಿ ಸಂತಸ ಮನೆ ಮಾಡಿದೆ.
ದೆಹಲಿಯಲ್ಲಿ ಜ.19, 20ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಆಯ್ಕೆ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಕೆ.ಎಂ.ನೇತ್ರಾವತಿ ಪಾತ್ರರಾಗಿದ್ದಾರೆ. ಗ್ರಾಮದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನೇತ್ರಾವತಿ ಅಭ್ಯಾಸ ಮಾಡುತ್ತಿದ್ದಾರೆ.