ಮಾನವ ಕುಲಕ್ಕೆ ಕುವೆಂಪು ಮಾರ್ಗದರ್ಶನ ಸಾರ್ವಕಾಲಿಕ: ಸಂತೋಷ ಬಂಡೆ

Kuvempu's guidance to mankind is good for all time

ಇಂಡಿ 29: ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ, ಆದರ್ಶಗಳು ಸಾರ್ವಕಾಲಿಕ. ಅವರ ವಿಶ್ವ ಮಾನವ ಸಂದೇಶದ ಚಿಂತನೆಗಳು ಇಂದಿನ ಜಾಗತಿಕ ಸಮಸ್ಯೆಗಳಿಗೆ ಪರಿಹಾರವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ವಿಶ್ವ ಮಾನವ ಸಂದೇಶಗಳ ಕುರಿತ ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವ ಮಾನವ ಸಂದೇಶ ಸರಳವಾಗಿದ್ದು, ಮನುಜ ಕುಲ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಇವುಗಳ ಮೇಲೆ ನಿಂತಿದೆ. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯವಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯವಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ನಾವೆಲ್ಲರೂ ಅವರ ಆಶಯದಂತೆ ಬದುಕಬೇಕು ಎಂದು ಹೇಳಿದರು.

ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ಕನ್ನಡಕ್ಕೆ ಹೊಸ ನುಡಿಗಟ್ಟು, ಹೊಸ ಕಲ್ಪನೆ ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ಅವರ ಪುಸ್ತಕಗಳನ್ನು ಇಂದಿನ ಮಕ್ಕಳು, ಯುವಕರು ಓದಿ ಅರ್ಥೈಸಿಕೊಂಡು, ಅದರಲ್ಲಿಯ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಪಾಲಕರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.