ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ ಎಲ್ ಕೃಷ್ಣನಾಯಕ

ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ ಎಲ್ ಕೃಷ್ಣನಾಯಕ L Krishnanayaka recognizes and encourages children's talents

                   ಹೂವಿನ ಹಡಗಲಿ 04:  ಪ್ರತಿ ಮಗುವಿನಲ್ಲಿ ಪ್ರತಿಭೆ ಇರುತ್ತದೆ .ಮಗುವಿನ ಆಸಕ್ತಿ ಕ್ಷೇತ್ರ ಗಮನಿಸಿ  ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ಶಾಸಕ ಎಲ್ ಕೃಷ್ಣನಾಯಕ ಹೇಳಿದರು.ಪಟ್ಟಣದ ಜಿ ಪಿ ಜಿ ಪ್ರೌಢಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ.ಶಿಕ್ಷಕರು ಮಕ್ಕಳ ಸೃಜನಶೀಲತೆ ಗುಣ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿರಿ ಎಂದು ತಿಳಿಸಿದರು.ಸರ್ಕಾರಿ ಪ್ರಾಥಮಿಕ ಪ್ರೌಢಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

                  ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಬಡವರ ಮಧ್ಯಮ ವರ್ಗದ ಕುಟುಂಬದವರು.ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕೆಲಸ ನಿರಂತರವಾಗಿ ಆಗಬೇಕು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಮಕ್ಕಳ ಪ್ರತಿಭೆ ಅರಳಲು ಇಲಾಖೆ ಪ್ರತಿ ವರ್ಷ ಕಾರ್ಯಕ್ರಮ ಆಯೋಜಿಸುತ್ತಿದೆ. ಶಿಕ್ಷಕರು ನ್ಯಾಯಬದ್ಧ ತೀಪು ನೀಡಿರಿ ಎಂದು ತಿಳಿಸಿದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ , ಯುವ ಮುಖಂಡರಾದ ಪುನೀತ್ ದೊಡ್ಡಮನಿ, ಜಗದೀಶ್ ಮೀರಾಕೊರ್ನಹಳ್ಳಿಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ ಬಿ ಜಗದೀಶ್ ಕಾರ್ಯದರ್ಶಿ ವಿ ಎಚ್ ಯೇಸು ಜಿಲ್ಲಾ ಉಪಾಧ್ಯಕ್ಷೆ ಸಿದ್ದಮ್ಮ ಎ ಎಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ ರಾಜ್ಯ ಸಹ ಕಾರ್ಯದರ್ಶಿ ಗಡ್ಡಿ ಶಿವಕುಮಾರ್ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಕೆ ಮಾದೇಶ್ವರ ಕೆ ಜಗದೀಶ್, ಪ್ರಾಚಾರ್ಯರಾದ ಕೋರಿ ಹಾಲೇಶ್ ಉಪ ಪ್ರಾಂಶುಪಾಲೆ ಕವಿತಾ ಜಿ ವಿವಿಧ ಶಿಕ್ಷಕರ ಸಂಘಗಳ ಎಂ ಶೇಕ್ ಅಹಮದ್ ಎಂ ಶಿವಪ್ಪ ಯಂಕಾನಾಯ್ಕ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರಾಥಮಿಕ ಪ್ರೌಢಶಾಲಾ ಶಾಲಾ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಹಣ್ಣಿ ನರೇಶ, ಸಚಿನ್ ಆರಾಧ್ಯ ಹೊನ್ನಪ್ಪ ನಿರ್ವಹಿಸಿದರು.ಜಿ ಪಿ ಜಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.