ಶ್ರೀನಗರ, ಮಾರ್ಚ್ 11:ಸಿಆರ್ಪಿಎಫ್ ಬಂಕರ್ ಬಳಿ ಸಜೀವ ಗ್ರನೇಡ್ ಪತ್ತೆಯಾಗಿದ್ದು ಅದನ್ನು ಸಕಾಲದಲ್ಲಿ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಲಾಗಿದೆ. ಭದ್ರತಾ ಪಡೆಗಳು ಸಜೀವ ಬಾಂಬ್ ನಿಷ್ಕ್ರಿಯಗೊಳಿದ ನಂತರ ಭಾರಿ ದೊಡ್ಡ ಅನಾಹುತ ತಪ್ಪಿದೆ."ಬಾಂಬ್ ಡಿಸ್ಪೋಸಬಲ್ ಸ್ಕ್ವೇರ್ (ಬಿಡಿಎಸ್) ಅನ್ನು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ನಿಷ್ಕ್ರಿಯಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಒಂದು ದೊಡ್ಡ ದುರಂತವನ್ನು ತಪ್ಪಿಸುವ ಮೂಲಕ ಯಾವುದೇ ಹಾನಿಯಾಗದಂತೆ ಬಾಂಬ್ ನಿಷ್ಕ್ರಿಯಗೊಳಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಬಂಕರ್ ಬಳಿ ಗ್ರೆನೇಡ್ ಹೇಗೆ ಬಂತು ತಕ್ಷಣ ಸ್ಪಷ್ಟವಾಗಿ ಗೊತ್ತಾಗಿಲ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.