ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ
LKG, UKG classes begin in government schools
ಹಾನಗಲ್ 17: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸುವುದರಿಂದ ಮಕ್ಕಳ ದಾಖಲಾತಿ ಹೆಚ್ಚಲಿದೆ. ತಾಲೂಕಿನಲ್ಲಿ ಆಯ್ದ ಹಲವು ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ಶಿರಗೋಡ ಗ್ರಾಮದ ಮೌಲಾನಾ ಆಜಾದ್ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿಯ ಪ್ರಾರಂಭೋತ್ಸವದಲ್ಲಿ ಭಾಗವಹಿಸಿದ ಅವರು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿತ ಕಾಣುತ್ತಿದೆ. ಈ ನಿಟ್ಟಿನಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲಾಗುತ್ತಿದೆ. ಇದೀಗ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದರು.
ಗ್ರಾಪಂ ಉಪಾಧ್ಯಕ್ಷ ಮುಸ್ತಫಾ ಮುಜಾವರ, ತಾಪಂ ಕೆಡಿಪಿ ಸದಸ್ಯ ಮಾರ್ತಾಂಡಪ್ಪ ಮಣ್ಣಮ್ಮನವರ, ಮುಖ್ಯೋಪಾಧ್ಯಾಯ ಸಾಧಿಕ್, ಮುಖಂಡರಾದ ಇಕ್ಬಾಲ್‌ಸಾಬ ಮುಲ್ಲಾ, ಬಷೀರ್ ನಾಲಬಂದ, ಸಂದೀಪ ಪಾಟೀಲ, ಗುಲಾಬಬಾಷಾ ಆಲೂರ, ಶಫಿ ಹಂಚಿನಮನಿ, ಜಯರಾಮ್ ಮಾಳಾಪೂರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಇದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 