ಶ್ರಮಜೀವಿಗಳಿಗೆಂದೇ ಮೀಸಲಾದ ದಿನ ಕಾರ್ಮಿಕರ ದಿನ: ಸಿದ್ರಾಮ ಕಾಸೆ
ಶ್ರಮಜೀವಿಗಳಿಗೆಂದೇ ಮೀಸಲಾದ ದಿನ ಕಾರ್ಮಿಕರ ದಿನ: ಸಿದ್ರಾಮ ಕಾಸೆ
ವಿಜಯಪುರ 01: ಕಾರ್ಮಿಕರು ಜಗತ್ತಿನ ಆಸ್ತಿ. ಕಾರ್ಮಿಕರಿಲ್ಲದ ಜಗತ್ತನ್ನು ಊಹಿಸುವುದಕ್ಕೇ ಸಾಧ್ಯವಿಲ್ಲ. ಇಂತಹ ಶ್ರಮಜೀವಿಗಳನ್ನು ಗೌರವಿಸುವ, ಅವರ ಸೇವೆಯನ್ನು ಸ್ಮರಿಸುವ ದಿನವಾಗಿ ಪ್ರತಿವರ್ಷ ‘ಅಂತಾರಾಷ್ಟ್ರೀಯ ಕಾರ್ಮಿಕರ ದಿನ’ವನ್ನು ಆಚರಿಸಲಾಗುತ್ತದೆ ಎಂದು ರವಿ ಇಂಡಸ್ಟ್ರೀಸ್ ಮಾಲೀಕರಾದ ಸಿದ್ರಾಮ ಕಾಸೆ ಹೇಳಿದರು.
ಅವರು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕ ದಿನಾಚರಣೆ ನಿಮಿತ್ಯವಾಗಿ ಕಾರ್ಮಿಕರಿಗೆ ಸಿಹಿ ವಿತರಿಸಿ ಶಾಲು ಹೊದಿಸಿ ಸನ್ಮಾನಿಸದ ಸಂದರ್ಭದಲ್ಲಿ ಮಾತನಾಡಿದರು. ಮೇ 1 ಅಂತಾರಾಷ್ಟ್ರೀಯ ಕಾರ್ಮಿಕರ ದಿನ. ಇದು ಶ್ರಮಜೀವಿಗಳಿಗೆಂದೇ ಮೀಸಲಾದ ದಿನ. ಪ್ರತಿಯೊಂದು ಕ್ಷೇತ್ರದಲ್ಲೂ ಶ್ರಮಪಟ್ಟು ದುಡಿಯುವ ಕೆಲಸಗಾರರು ದೇಶ, ರಾಜ್ಯದ ಅಭಿವೃದ್ಧಿಗೆ ಹೆಗಲು ಕೊಡುತ್ತಾರೆ. ಇಂತಹ ಶ್ರಮಜೀವಿಗಳ ಪ್ರಯತ್ನ, ಕೆಲಸದಲ್ಲಿಯೇ ದೇಶದ ಅಭಿವೃದ್ಧಿಯಡಗಿದೆ. ಹೀಗೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಶ್ರಮ ಮತ್ತು ಸೇವೆಯನ್ನು ಗೌರವಿಸುವ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ ನಮ್ಮ ಕರ್ತವ್ಯವಾಗಿದೆ ಎಂದರು.
ನೇತಾ, ಬಡಕನ, ಬುಲಾಯಿ, ಗೋಪಾಲ ಕಾರ್ಮಿಕರಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಬಸವರಾಜ ಮಲಘಾಣ, ಉಮೇಶ ಶಿವಶರಣ, ಸುರೇಶ ಜಾಧವ, ಶ್ರೀನಿವಾಸ ವಾಘ್ಮೋರೆ, ಶ್ರೀಕಾಂತ ಬಂಡಿವಡ್ಡರ, ಭೀಮಶಿ, ಗೋವಿಂದ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 