ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಕೊರತೆ: ಕೂಡಲೇ ಸರಿಪಡಿಸಲು ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
Lack of basic facilities for hostel students: SFI-led student protest demanding immediate redressal
ರಾಣಿಬೆನ್ನೂರು 27: : ನಗರದ ಹೊರವಲಯದಲ್ಲಿರುವ ಶಬರಿ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಂದ ವಂಚನೆ ವಿರೋಧಿಸಿ, ನಿಲಯ ಪಾಲಕರು ನಿರ್ಲಕ್ಷ್ಯ ಖಂಡಿಸಿ, ಸಿಬ್ಬಂದಿ ವರ್ಗಾವಣೆಗಾಗಿ, ಮೂಲಭೂತ ಸೌಕರ್ಯಗಳನ್ನು ವಿತರಣೆ ಮಾಡಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಣೆಬೆನ್ನೂರು ಹಾಸ್ಟೆಲ್ ಘಟಕ ನೇತೃತ್ವದಲ್ಲಿ ವಸತಿ ನಿಲಯದ ಎದುರು ವಿದ್ಯಾರ್ಥಿಗಳು ಪ್ರತಿಭಟನಾ ಧರಣಿ ನಡೆಸಿ ನಿಲಯ ಪಾಲಕ ರಾಜಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಂಚಾಲಕರಾದ ಅರುಣ್ ನಾಗವತ್ ಮಾತನಾಡಿ, ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಿಂದ ವಂಚನೆ ಮಾಡುತ್ತಿರುವುದು ಸರಿಯಲ್ಲ. ಖಂಡನೀಯ ವಿಚಾರವಾಗಿದೆ. ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಆಶ್ರಯವಾಗಿರುವ ಈ ವಸತಿ ನಿಲಯದಲ್ಲಿ ಸರ್ಕಾರ ನೀಡುವ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ.
ಮೇನ್ ಚಾರ್ಟ್ ಪ್ರಕಾರವಾಗಿ ಊಟ, ಉಪಚಾರ, ಸೌಲಭ್ಯಗಳು ಸಿಗುತ್ತಿಲ್ಲ. ಹಾಗೆ ನೀರಿನ ದೊಡ್ಡ ಮಟ್ಟದ ಸಮಸ್ಯೆ ಎದುರಾಗಿದೆ ಎಂದು ವಿದ್ಯಾರ್ಥಿಗಳು ಎಸ್‌ಎಫ್‌ಐ ಕಾರ್ಯಕರ್ತರ ಮುಂದೆ ತಮ್ಮ ಅಳಲು ಹೇಳಿಕೊಂಡಿದ್ದಾರೆ. ಸರಿಯಾದ ಸಮಯಕ್ಕೆ ಸರಿಯಾದ ಊಟದ ವ್ಯವಸ್ಥೆ ಮಾಡುತ್ತಿಲ್ಲ ಗುಣಮಟ್ಟದ ಆಹಾರ ನೀಡುವಂತೆ ಅನೇಕ ಬಾರಿ ಹೇಳಿದ್ದರೂ ಹಾಗೂ ಕಳೆದ ಕೆಲವು ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಊಟದ ಸಮಸ್ಯೆ ಎದುರಾಗಿದೆ. ಉತ್ತಮ ಗುಣಮಟ್ಟದ ಆಹಾರ ನಿಡುತ್ತಿಲ್ಲ, ತರಕಾರಿ ಸಾಂಬಾರ, ಪಲ್ಯೆಗಳಲ್ಲಿ ತರಕಾರಿ ಹಾಕುವುದಿಲ್ಲ,
ವಿವಿಧ ತಿಂಡಿ ತಿನಿಸುಗಳಲ್ಲಿ ಅಡುಗೆ ಎಣ್ಣೆ ಬಳಸುವುದಿಲ್ಲ, ಒಟ್ಟಾರೆ ರುಚಿಕರ ಆಹಾರ ನೀಡುವುದಿಲ್ಲ. ಹಾಜರಾತಿ ತಕ್ಕಂತೆ ಆಹಾರ ನೀಡುವುದಿಲ್ಲ. ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲ ಸ್ವಚ್ಚತೆ ಕಾಪಾಡುವುದಿಲ್ಲ. ಗ್ರಂಥಾಲಯಗಳಲ್ಲಿ ಸಿಲೆಬಷ್ ಸೇರಿದಂತೆ ಅನೇಕ ವಿದ್ಯಾರ್ಥಿಗಳಿಗೆ ವಿಷಯವಾರು ಪುಸ್ತಕಗಳು ದೊರೆಯುತ್ತಿಲ್ಲ. ಇಡೀ ವಸತಿ ನಿಲಯದ ಮೂಲಭೂತ ಸೌಕರ್ಯಗಳಿಂದ ವಂಚನೆ ಮಾಡಲಾಗಿದೆ.
ವಿದ್ಯಾರ್ಥಿಗಳ ನ್ಯಾಯಯುತ ಎಲ್ಲಾ ಬೇಡಿಕೆಗಳನ್ನು ಎರಡು ದಿನದ ಒಳಗೆ ಈಡೇರಿಸಲು ಅಧಿಕಾರಿಗಳು ಮುಂದಾಗಬೇಕು. ಒಂದು ವೇಳೆ ನಿರ್ಲಕ್ಷಿಸಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಹೋರಾಟ ನಡೆಸಲಾಗುವುದು ಎಂದರು. ಹಾಸ್ಟೇಲ್ ಘಟಕದ ಅಧ್ಯಕ್ಷ ರಾಘವೇಂದ್ರ ಎಸ್ ಮಾತನಾಡಿ, ಈ ಕೂಡಲೆ ಹಾಸ್ಟೆಲ್ ನಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು, ವಸತಿ ನಿಲಯದಲ್ಲಿನ ಕೆಲ ಸಮಸ್ಯೆಗಳ ಜೊತೆಗೆ ಸೂಕ್ತ ಆಹಾರದ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ತೊಂದರೆಯಾಗಿದೆ.
ಈ ಕೂಡಲೇ ಊಟದ ವ್ಯವಸ್ಥೆ ಸರಿಪಡಿಸಿ, ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವ ವಿದ್ಯಾರ್ಥಿ ವಿರೋಧಿ ನೀತಿ ಸರಿಯಲ್ಲ. ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತಕ್ಕಾಗಿ ಕ್ರಮಕ್ಕಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮುಂದಿನ ದಿನ ದೂರ ನೀಡಲಾಗುವುದು ಎಂದು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಹಾಸ್ಟೆಲ್ ಘಟಕ ಕಾರ್ಯದರ್ಶಿ ಪುನೀತ್ ವಡ್ಡರ, ಉಪಾಧ್ಯಕ್ಷ ಜೀವನ ನಾಯ್ಕ್, ಹಾಲೇಶ್ ಎನ್, ಪ್ರದೀಪ್ ಲಮಾಣಿ, ಧರ್ಮ ಚವ್ಹಣ, ಸಹ ಕಾರ್ಯದರ್ಶಿ ಅಶೋಕ ಎಲ್, ನವೀನ ನಡವಿಗೇರಿ, ಅಭಿಶೇಕ್ ಎನ್, ಮೋಹನ್ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 