ಮಳೆಯ ಕೊರತೆ: ರೈತರಿಗೆ ಬೆಳೆ ನಷ್ಟ, ಸರ್ಕಾರದಿಂದ ಎಚ್ಚರಿಕೆ
Lack of rain: Crop losses for farmers, government warns
ಮುಂಡಗೋಡ್ 28 : ತಾಲೂಕಿನಲ್ಲಿ ಈ ಬಾರಿ ಮುಂಗಾರು ಮಳೆಯ ಪ್ರಮಾಣ ನೀರೀಕ್ಷಿತ ಮಟ್ಟಕ್ಕೆ ತಲುಪದೆ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸತತವಾಗಿ ಮಳೆ ಕೊರತೆಯಿಂದ ಹೊಲಗಳಲ್ಲಿ ಬೆಳೆಗಳು ಬಣ್ಣ ಕಳೆದುಕೊಂಡು ಒಣಗುವ ಸ್ಥಿತಿಗೆ ತಲುಪಿವೆ. ಕಳೆದ ನಾಲ್ಕು ದಿನಗಳಿಂದ ಮಳೆ ಮತ್ತೆ ಕಾಣಿಸದಿರುವುದರಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದೆ.
ವಾರ್ಷಿಕ ಸರಾಸರಿ 1,401 ಮಿ.ಮೀ. ಮಳೆಯಾಗಬೇಕಾಗಿದ್ದರೂ, ಈ ವರ್ಷ ಜನವರಿ 1ರಿಂದ ಜೂನ್ 23ರವರೆಗೆ ಕೇವಲ 247.7 ಮಿ.ಮೀ. ಮಳೆಯಾಗಿದೆ. ಇದು ಸರಾಸರಿಗಿಂತ 96 ಮಿ.ಮೀ. ಕಡಿಮೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 448.9 ಮಿ.ಮೀ. ಮಳೆಯಾಗಿತ್ತು ಎಂದು ಕೃಷಿ ಇಲಾಖೆ ತಿಳಿಸಿದೆ.
ಮಳೆಯ ಕೊರತೆಯಿಂದಾಗಿ ಪ್ರಮುಖ ಬೆಳೆಗಳಾದ ಭತ್ತ, ಗೋವಿನ ಜೋಳ, ಕಬ್ಬು ಹಾಗೂ ಸೋಯಾಬೀನ್ ಬೆಳೆಗಳಿಗೆ ಹಾನಿಯಾಗಿದೆ. ಭತ್ತದ ಬೆಳೆ ಹೆಚ್ಚಾಗಿ ಪರಿಣಾಮಕ್ಕೊಳಗಾಗಿದ್ದು, ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ, ಬೆಳೆಗಳಿಗೆ ಸೂಕ್ತ ಬೆಂಬಲ ನೀಡಲು ಕೃಷಿ ಇಲಾಖೆ ಸಲಹೆಗಳನ್ನು ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 