ಅಥಣಿಯಲ್ಲಿ ಕೆರೆ ತುಂಬುವ ಯೋಜನೆಗೆ ಚಾಲನೆ
Lake-filling project launched in Athani
ಅಥಣಿ 22 : ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸತತ ಪ್ರಯತ್ನದ ಫಲವಾಗಿ ಶತಮಾನಕ್ಕೂ ಹೆಚ್ಚು ಕಾಲ ನಿರ್ಲಕ್ಷ್ಯಕ್ಕೊಳಗಾಗಿದ್ದ ಜೋಡು ಕೆರೆ ಅಭಿವೃದ್ಧಿ ಕಾಮಗಾರಿಯ ಮೊದಲ ಹಂತ ಪೂರ್ಣಗೊಂಡಿದ್ದು, ಸಣ್ಣ ಕೆರೆ ತುಂಬುವ ಯೋಜನೆಗೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಯುವ ಧುರೀಣ ಶಿವಕುಮಾರ ಸವದಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ ಸವದಿ, ಜೋಡು ಕೆರೆಯನ್ನು ಅಭಿವೃದ್ಧಿಪಡಿಸಿ ಅಥಣಿ ನಗರವನ್ನು ಸುಂದರಗೊಳಿಸುವುದು ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಕನಸಾಗಿತ್ತು. ಈ ಹಿನ್ನೆಲೆಯಲ್ಲಿ ಜೋಡು ಕೆರೆ ಅಭಿವೃದ್ಧಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸ ಲಾಗುತ್ತಿದೆ ಎಂದರು. ಯೋಜನೆ ಅನುಷ್ಠಾನಕ್ಕೆ ಸಹಕರಿಸಿದ ಪುರಸಭೆಯ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಹಾಗೂ ಕೆರೆಯನ್ನು ಸುಂದರವಾಗಿ ವಿನ್ಯಾಸಗೊಳಿಸಿದ ಗುತ್ತಿಗೆದಾರರನ್ನು ಅಭಿನಂದಿಸಿದರು.
ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ ಮಾತನಾಡಿ, ಜೋಡು ಕೆರೆ ಅಥಣಿ ಜನರ ಆಸ್ತಿಯಾಗಿದ್ದು, ಅದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವುದು ಎಲ್ಲರ ಕರ್ತವ್ಯ. ಕೆರೆಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ಬಚ್ಚಿ, ಹೂವು ಸೇರಿದಂತೆ ನೀರು ಕಲುಷಿತಗೊಳಿಸುವ ವಸ್ತುಗಳನ್ನು ಹಾಕದಂತೆ ಹಾಗೂ ಜಲಮೂಲವನ್ನು ಸ್ವಚ್ಛವಾಗಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಸದಸ್ಯರಾದ ಮಲ್ಲಿಕಾರ್ಜುನ ಬುಟಾಳಿ, ಪ್ರಮೋದ ಬಿಳ್ಳೂರ, ರಾಜಶೇಖರ ಗುಡೋಡಗಿ, ರಿಯಾಜ ಸನದಿ, ಮೃಣಾಲಿನಿ ದೇಶಪಾಂಡೆ, ರಮೇಶ ಪವಾರ, ಉದಯ ಸೋಳಸಿ, ಬಾಬು ಖೆಮಲಾಪುರ, ಬಿ.ಎನ್. ಪಾಟೀಲ, ವಿಶ್ವನಾಥ ಗಡದೆ ಸೇರಿದಂತೆ ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 