ಆ.9ರಂದು ಲಕ್ಷ ಬಿಲ್ವಾರ್ಚನೆ, ಧರ್ಮಸಭೆ
Laksha Bilvarchana and Dharma Sabha on August 9
ಇಂಡಿ, ಆ.7 : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣ ಮಠದಲ್ಲಿ ಆಗಸ್ಟ್ 9ರಂದು ಭಾನುವಾರ ಲಕ್ಷ ಬಿಲ್ವಾರ್ಚನೆ, ಧರ್ಮಸಭೆ ಹಾಗೂ ಐದು ಸಾವಿರಕ್ಕೂ ಹೆಚ್ಚು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಆಯೋಜಿಸಲಾಗಿದೆ.
ಲಚ್ಯಾಣ ಮಠದ ಆವರಣದಲ್ಲಿ ನಡೆಯುವ ಕಾರ್ಯಕ್ರಮವು ಮುಗಳಖೇಡ ಮಠದ ಪರಮಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಶ್ರೀ ಶ್ರೀ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಮಠದ ಆಡಳಿತಾಧಿಕಾರಿ ಬಸವರಾಜ ಜೋಪಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಸಿದ್ಧಲಿಂಗ ಮಹಾರಾಜರ ಕೃತಾರ್ಥ ಗದ್ದುಗೆಗೆ ಲಕ್ಷ ಬಿಲ್ವಾರ್ಚನೆ ಸಲ್ಲಿಸಲಾಗುವುದು. ಬಿಲ್ವಪತ್ರೆ ಶಿವನಿಗೆ ಅತ್ಯಂತ ಪ್ರಿಯವಾಗಿದ್ದು, ಭಕ್ತಿಭಾವದಿಂದ ಬಿಲ್ವಾರ್ಚನೆ ಸಲ್ಲಿಸುವುದರಿಂದ ವಿಶೇಷ ಪುಣ್ಯ ಲಭಿಸುತ್ತದೆ ಎಂಬ ನಂಬಿಕೆ ಇದೆ. ಈ ಉದ್ದೇಶದಿಂದ ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಗೋವಾ ಹಾಗೂ ಆಂಧ್ರ್ರದೇಶದಿಂದ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನೀರೀಕ್ಷೆಯಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು ಸಾಧು-ಸಂತರು ಗಣ್ಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸಿದ್ಧಲಿಂಗ ಮಹಾರಾಜರ ಕೃಪೆಗೆ ಪಾತ್ರರಾಗುವಂತೆ ಬಸವರಾಜ ಜೋಪಡೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ನೀಲಕಂಠಗೌಡ ಪಾಟೀಲ, ಗುರು ಆಚಲೇರಿ ಸೇರಿದಂತೆ ಲಚ್ಯಾಣ ಮಠದ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 