ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ

ಲೋಕದರ್ಶನ ವರದಿ

ವಿಜಯಪುರ 07: ರಾಜ್ಯ ಸರ್ಕಾರದ ಕೃಷ್ಣಾ ಭಾಗ್ಯ ಜಲನಿಗಮ ವಿಶೇಷ ಘಟಕ ಯೋಜನೆಯ ಅನುದಾನದಡಿಯಲ್ಲಿ ನಗರದ ಅಂಬೇಡ್ಕರ್ ಕ್ರೀಡಾಂಗಣ ಹಾಗೂ ಕನಕದಾಸ ಬಡಾವಣೆಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಭೂಮಿ ಪೂಜೆ ನೆರವೇರಿಸಿದರು. 

ಅಂಬೇಡ್ಕರ್ ಕ್ರೀಡಾಂಗಣದ ಹತ್ತಿರ ಸಿಂಥೆಟಿಕ್ ಟ್ರ್ಯಾಕ್ ನಿಮರ್ಾಣಕ್ಕೆ 5 ಕೋಟಿ ರೂ. ವೆಚ್ಚದಲ್ಲಿ ಹಾಗೂ ಕನಕದಾಸ ಬಡಾವಣೆಯಲ್ಲಿ ಈಜುಕೊಳ ನಿಮರ್ಾಣಕ್ಕೆ 2.20ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು, ಹೈದರಾಬಾದ್ನ ಗ್ರೇಟ್ ಸ್ಪೋಟ್ಸ್ ಹಾಗೂ ತೀರ್ಥರಾಜ್ ಟೆಂಡರ್ದಾರರಾಗಿದ್ದಾರೆ. 

ಈ ಸಂದರ್ಭದಲ್ಲಿ ಮಹಾಪೌರ ಶ್ರೀದೇವಿ ಲೋಗಾಂವಿ, ಉಪ ಮಹಾಪೌರ ಗೋಪಾಲ ಘಟಕಾಂಬಳೆ, ಪಾಲಿಕೆ ಸದಸ್ಯರಾದ ಪ್ರಕಾಶ ಮಿಜರ್ಿ, ಅಬ್ದುಲರಜಾಕ ಹೊತರ್ಿ, ಅಲ್ತಾಫ್ ಇಟಗಿ, ಪ್ರೇಮಾನಂದ ಬಿರಾದಾರ, ಮಹಾನಗರ ಪಾಲಿಕೆ ಆಯುಕ್ತರಾದ ಔದ್ರಾಮ, ಯುವಜನಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಎಸ್.ಜಿ.ಲೋಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.