ಭಾಷೆ ನಮ್ಮ ಅಸ್ತಿತ್ವದ ಪ್ರತಿಬಿಂಬ : ಡಾ. ಸುಷ್ಮಾ ಎನ್‌. ಜೋಗನ್ ಅಭಿಮತ

ಭಾಷೆ ನಮ್ಮ ಅಸ್ತಿತ್ವದ ಪ್ರತಿಬಿಂಬ : ಡಾ. ಸುಷ್ಮಾ ಎನ್‌. ಜೋಗನ್ ಅಭಿಮತ Language is a reflection of our existence: Dr. Sushma N. Jogan's opinion

ಬಳ್ಳಾರಿ  06:  ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆಯನ್ನು ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುಷ್ಮಾ ಎನ್‌. ಜೋಗನ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಭಾಷೆಯ ಅಭಿವೃದ್ಧಿ, ಸಂರಕ್ಷಣೆ ಹಾಗೂ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಮಹತ್ವದ ಸಂಸ್ಥೆಯಾಗಿದೆ ಎಂದು ಹೇಳಿದರು.

ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಉಳಿಸಿ ಬೆಳೆಸುವಲ್ಲಿ ಪರಿಷತ್ತಿನ ಪಾತ್ರ ಅನನ್ಯವಾಗಿದ್ದು, “ಭಾಷೆ ನಮ್ಮ ಅಸ್ತಿತ್ವದ ಪ್ರತಿಬಿಂಬ” ಎಂದು ಅಭಿಪ್ರಾಯಪಟ್ಟರು. ಸಮ್ಮೇಳನಗಳು, ಕವಿಗೋಷ್ಠಿಗಳು, ಕಥಾ ಸ್ಪರ್ಧೆಗಳು ಹಾಗೂ ಪುಸ್ತಕ ಪ್ರದರ್ಶನಗಳ ಮೂಲಕ ಕನ್ನಡದ ಸೊಬಗು ಜನಮಾನಸದಲ್ಲಿ ಮೂಡುತ್ತದೆ ಎಂದರು. ಕನ್ನಡವನ್ನು ಕೇವಲ ಭಾಷೆಯಾಗಿ ನೋಡದೆ, ಜೀವನದ ಅವಿಭಾಜ್ಯ ಅಂಗವಾಗಿ ಸ್ವೀಕರಿಸಬೇಕು ಎಂದು ಕರೆ ನೀಡಿದರು.

ಇಂದಿನ ಯುವಕರಿಗೆ ಸಾಹಿತ್ಯದ ಪರಿಚಯ ಅತ್ಯಗತ್ಯವಾಗಿದ್ದು, ಡಿಜಿಟಲ್ ಯುಗದಲ್ಲಿ ಕನ್ನಡವನ್ನು ಜಾಗತಿಕ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಚಾರಗೊಳಿಸುವುದು ಅವಶ್ಯಕ ಎಂದು ತಿಳಿಸಿದರು.ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ತಾಲೂಕು ಘಟಕದ ವತಿಯಿಂದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿನಿ ಕುಮಾರಿ ಶಿವಲೀಲಾ ಪ್ರಾರ್ಥನಾ ಗೀತೆಯನ್ನು ಹಾಡಿದರು. ಉತ್ತರೇಶ್ ಗಣ್ಯರನ್ನು ಸ್ವಾಗತಿಸಿದರು. ತಾಲೂಕು ಘಟಕದ ಅಧ್ಯಕ್ಷರಾದ ನಾಗರೆಡ್ಡಿ ಕೆ.ವಿ. ಪ್ರಸ್ತಾವಿಕ ನುಡಿಗಳನ್ನು ನುಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹಿರಿಯ ಸಹಾಯಕ ಪ್ರಾಧ್ಯಾಪಕರಾದ  ಆಲಂಭಾಷ ಅವರು, ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. 

ಡಾ. ಯು. ಶ್ರೀನಿವಾಸ್ ಮೂರ್ತಿ ತಮ್ಮ ವಿಶೇಷ ಉಪನ್ಯಾಸದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು 1915ರಲ್ಲಿ ಎಚ್‌.ವಿ. ನಂಜುಂಡಯ್ಯ ಅವರ ನೇತೃತ್ವದಲ್ಲಿ ಸ್ಥಾಪನೆಯಾಗಿದ್ದು, ನಂತರ ಅದರ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಪರಿವರ್ತಿಸಲಾಯಿತು ಎಂದು ವಿವರಿಸಿದರು. ಬಳ್ಳಾರಿಯಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ನಾಡು-ನುಡಿ ಸೇವೆ ಮಾಡಿದ ನಾಲ್ವರು ಗಣ್ಯರನ್ನು ಗೌರವಿಸಿ ಸತ್ಕರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವೀರಭದ್ರ​‍್ಪ ಎಚ್‌. ಅವರು, ಕನ್ನಡದ ಅಸ್ಮಿತೆಯನ್ನು ಉಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ಕಾಲೇಜಿನಲ್ಲಿ ನಡೆದಿರುವುದು ಹೆಮ್ಮೆಯ ವಿಚಾರ ಎಂದು ಅಭಿಪ್ರಾಯಪಟ್ಟರು.ಈ ಕಾರ್ಯಕ್ರಮದಲ್ಲಿ ಕಾರ್ತಿಕ್ ಮರಿಸ್ವಾಮಿ ಮಠ, ಡಿ.ವೆಂಕಮ್ಮ  ಶ್ರೀ ಮತಿ ಚಂದ್ರಿಕ ಉಪನ್ಯಾಸಕರು, ಶರಣಬಸವ ಪ್ರಶಿಕ್ಷಣಾರ್ಥಿಗಳು ಇತರರು ಭಾಗವಹಿಸಿದ್ದರು.