ಆಡಳಿತ ಸುರಳಿಕರಣಕ್ಕೆ ಲ್ಯಾಪ್‌ಟಾಪ್ ವಿತರಣೆ: ಶಾಸಕ ಶ್ರೀನಿವಾಸ ಮಾನೆ
Laptop distribution for administrative streamlining: MLA Srinivas Mane
ಆಡಳಿತ ಸುರಳಿಕರಣಕ್ಕೆ ಲ್ಯಾಪ್‌ಟಾಪ್ ವಿತರಣೆ: ಶಾಸಕ ಶ್ರೀನಿವಾಸ ಮಾನೆ
ಹಾನಗಲ್ 06: ತಂತ್ರಜ್ಞಾನ ಬಳಸಿಕೊಂಡು ಜನರಿಗೆ ಸರಳ ಮತ್ತು ಸುಲಭವಾಗಿ ಸೇವೆ ನೀಡುವ ಉದ್ದೇಶದಿಂದ ರಾಜ್ಯದ 4 ಸಾವಿರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಕ್ರಮ ಕೈಗೊಂಡಿದ್ದಾರೆ. ಇಲಾಖೆಯಲ್ಲಿ ಹಲವು ಬದಲಾವಣೆ ತರುವ ಮೂಲಕ ಜನಸಾಮಾನ್ಯರ ಬದುಕಿನಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮೊದಲ ಹಂತದಲ್ಲಿ ತಾಲೂಕಿನ 25 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು. ಸರ್ಕಾರದ ಸೌಲಭ್ಯಗಳು ಹೆಚ್ಚಿರುವುದರಿಂದ ಅದಕ್ಕೆ ತಕ್ಕಂತೆ ಅಗತ್ಯ ಮಾಹಿತಿ, ದಾಖಲಾತಿ ಪಡೆಯಬೇಕಿದೆ. ಎಲ್ಲ ಯೋಜನೆ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ ಬಂದಿರುವುದರಿಂದ ತಂತ್ರಜ್ಞಾನದ ಸಹಾಯದಿಂದ ಕೆಲಸ, ಕಾರ್ಯಗಳಲ್ಲಿ ತೊಡಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಅಗತ್ಯ ಸೌಲಭ್ಯಗಳಿದ್ದರೆ ಉತ್ತಮವಾಗಿ ಕೆಲಸ, ಕಾರ್ಯಗಳನ್ನು ನಿರ್ವಹಿಸಬಹುದಾಗಿದೆ ಎಂದು ಹೇಳಿದ ಅವರು ಗ್ರಾಮ ಲೆಕ್ಕಾಧಿಕಾರಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಕಚೇರಿ, ಪೀಠೋಪಕರಣಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ ಅವರು ತಾಲೂಕಿನಲ್ಲಿ ಸಹ ಕಂದಾಯ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರಲಾಗುತ್ತಿದ್ದು, ಜನಸಾಮಾನ್ಯರಿಗೆ ಅನುಕೂಲವಾಗಿದೆ ಎಂದರು.
ತಹಶೀಲ್ದಾರ್ ರೇಣುಕಾ ಎಸ್. ಮಾತನಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಇ ಆಫೀಸ್ ಮೂಲಕ ಮಾಹಿತಿ ನಮೂದು ಮಾಡಲು ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ಅಗತ್ಯ ಹೆಚ್ಚಿದೆ. ಇಲಾಖೆಯ ಹಿರಿಯ ಅಧಿಕಾರಿಗಳು ಕಾಲಕಾಲಕ್ಕೆ ಕೇಳುವ ಮಾಹಿತಿ, ವರದಿ ನೀಡಲು ಸಹ ಅನುಕೂಲವಾಗಲಿದೆ. ಇಲಾಖೆಯ ಕಾರ್ಯ ಚಟುವಟಿಕೆಗಳ ಪ್ರಗತಿಗೂ ಹೆಚ್ಚು ಸಹಕಾರಿಯಾಗಲಿದೆ. ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಹಾನಗಲ್ ತಾಲೂಕಿನಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ತಮ್ಮ ಅನುದಾನದಡಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ್ದನ್ನು ನೆನೆಪಿಸಿ, ಸೌಲಭ್ಯ ಸದ್ಭಳಕೆ ಮಾಡಿಕೊಂಡು ಜನಪರ ಕೆಲಸ ಮಾಡುವಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.ಬಗರ್ ಹುಕುಂ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಎಂ.ಎಸ್.ಜಮಾದಾರ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 