1.09 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ

ಬೆಂಗಳೂರು, ಜ 12 :         ರಾಜ್ಯದ ಎಲ್ಲ ಸರ್ಕಾರಿ ಪ್ರಥಮ ದರ್ಜೆ  ಕಾಲೇಜುಗಳ 1.09 ಲಕ್ಷ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ  ಭಾನುವಾರ ಉಚಿತ ಲ್ಯಾಪ್ಟಾಪ್ ವಿತರಿಸಲಾಯಿತು.

ಉನ್ನತ ಶಿಕ್ಷಣ ಇಲಾಖೆ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ 8 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು.  

ನಂತರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವೇದಾ ಕೃಷ್ಣಮೂರ್ತಿ (ಮಹಿಳಾ ಕ್ರಿಕೆಟ್), ವಿವೇಕಾನಂದ ಹಳ್ಳಿಗೆರೆ (ಬೌನ್ಸ್ ಸ್ಕೂಟರ್ ಸಂಸ್ಥಾಪಕ), ರಾಧಾ ವೆಂಕಟೇಶ್ (ಅಂಗವಿಕಲ ಕ್ರೀಡಾಳು), ಪ್ರಣವ್ ವಿಠಲಪತಿ (ಸಾಫ್ಟ್ವೇರ್) ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ  ಯುವ ಸಬಲೀಕರಣ ಕೇಂದ್ರಗಳನ್ನೂ ಉದ್ಘಾಟಿಸಲಾಯಿತು. 

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬೆಂಗಳೂರು ರಾಮಕೃಷ್ಣ ಮಠದ ಸ್ವಾಮಿ ಮಂಗಲನಾಥಾನಂದಜಿ ಮಹಾರಾಜ್ ಉಪಸ್ಥಿತರಿದ್ದರು.