ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ: ಶಾಸಕ ರಾಜುಗೌಡ
Laptops distributed to village administrators: MLA Rajugowda
ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ: ಶಾಸಕ ರಾಜುಗೌಡ
ದೇವರಹಿಪ್ಪರಗಿ 30: ಗ್ರಾಮೀಣ ಭಾಗದ ರೈತರಿಗೆ ಶೀಘ್ರವಾಗಿ ಸೇವೆ ಒದಗಿಸಲು ನೆರವಾಗುವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಸರ್ಕಾರ ಲ್ಯಾಪ್ ಟ್ಯಾಪ್ ಒದಗಿಸಿದ್ದು ಸಮರ್ಕವಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ‘ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಜನಸಾಮಾನ್ಯರು, ಕೃಷಿಕರು ತಮ್ಮ ಕೆಲಸಕ್ಕಾಗಿ ಕಚೇರಿಗೆ ಬಂದಾಗ ಅವರನ್ನು ಪದೇ, ಪದೇ ಅಲೆಸದೆ ಶೀಘ್ರವಾಗಿ ಕೆಲಸಮಾಡಿ ಕೊಡಿ’ ಎಂದು ಹೇಳಿದರು.ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರು ಮಾತನಾಡಿ, ನೂತನ ತಾಲೂಕಿನಲ್ಲಿರುವ 11 ಜನ ಗ್ರಾಮ ಆಡಳಿತಾಧಿಕಾರಿಗಳಲ್ಲಿ ಸಾಂಕೇತಿಕವಾಗಿ ಶಾಸಕರ ನೇತೃತ್ವದಲ್ಲಿ 7 ಜನರಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಸ್.ಎಚ್. ರಾಠೋಡ,ಕಂದಾಯ ನೀರೀಕ್ಷಕ ಎಸ್. ಎಸ್.ಜಾಧವ,ಗ್ರಾಮ ಆಡಳಿತಾಧಿಕಾರಿಗಳಾದ ಸಂಗಮೇಶ ಗ್ವಾಳೇದ,ಅನೀಲ ರಾಠೋಡ, ರಾಮಪ್ಪ ರಾಂಪುರ ಮುಖಂಡರಾದ ವೀರೇಶ ಕುದರಿ ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 