ಜಿಲ್ಲಾಡಳಿತದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಬಾಗಲಕೋಟೆ 20: ಪ್ರತಿ ವರ್ಷದಂತೆ ವರ್ಷವೂ ನವೆಂಬರ 1 ರಂದು ಜರುಗಲಿರುವ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ ಹೇಳಿದರು.

      ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ನಿರ್ದರಿಸಲಾಗಿದ್ದು, ಅಂದು ಬೆಳಿಗ್ಗೆ 7.30ಕ್ಕೆ ಜಿಲ್ಲಾಡಳಿತ ಭವನದ ಮುಂದೆ ಇರುವ ಅಶೋಕ ಸ್ತಂಬದ ವೃತ್ತದಿಂದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆ ನಡೆಯಲಿದೆ. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ನಾಡಿನ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುವಂತ ಸ್ಥಬ್ದ ಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಲ್ಲಿ ಹೆಚ್ಚಿನ ಮಹಿಳಾ ಕಲಾತಂಡಗಳಿಗೆ ಭಾಗವಹಿಸುವಂತೆ ಮಾಡಲು ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಯಿತು. ಕಾರ್ಯಕ್ರಮ ಸಿದ್ದತೆಗೆ 9 ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯ ಸದಸ್ಯರ ಕರ್ತವ್ಯಗಳ ಬಗ್ಗೆ ಸಭೆ ಕರೆದು ಕಾರ್ಯಕ್ರಮ ರೂಪು ರೇಶೆಗಳನ್ನು ತಯಾರಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಗೀತೆ, ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಯನ್ನು ಹಾಡಿಸುವ ವ್ಯವಸ್ಥೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಣೀಯರಿಗೂ ಕೂಡ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದರು. ಜಿಲ್ಲಾ ಕ್ರೀಡಾಂಗಣ ಹಾಗೂ ಮೆರವಣಿಗೆ ಸ್ಥಳಗಳನ್ನು ಸ್ವಚ್ಛತೆ, ಶುದ್ದ ಕುಡಿಯುವ ನೀರು, ವೇದಿಕೆ, ವಿದ್ಯುತ್, ಧ್ವನಿವರ್ಧಗಳ ಹಾಗೂ ಜನರೇಟರ, ಆಸನಗಳ ವ್ಯವಸ್ಥೆಗಳ ಜೊತೆಗೆ ಪೋಲಿಸ್ ಬಂದೋಬಸ್ತಿ ವ್ಯವಸ್ಥೆ ಮಾಡಲು ತಿಳಿಸಿದರು. ಅಂದು ಸಂಜೆ ನವನಗರದ ಕಲಾಭವನದಲ್ಲಿ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಾದ್ಯಂತ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ತ್ರಿಭಾಷಾ ನಾಮಫಲಕ ಅಳವಡಿಸುವಂತೆ ವಿವಿಧ ಕನ್ನಡಪರ ಸಂಘಟನೆಗಳು ಸಭೆಗೆ ತಿಳಿಸಿದಾಗ ಇದಕ್ಕೆ ಸಮ್ಮತಿಸಿದ ಜಿಲ್ಲಾಧಿಕಾರಿಗಳು ಕ್ರಮಕ್ಕಾಗಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚೂಚಿಸಲಾಗುವುದೆಂದರು. ಹಾಗೂ ನವೆಂಬರ 1 ರಂದು ಸಂಬಳ ಸಹಿತ ಕಾಮರ್ಿಕರಿಗೆ ರಜೆ ನೀಡಬೇಕೆಂದು ಕನ್ನಡಪರ ಸಂಘಟನೆಗಳು ಸಭೆಗೆ ತಿಳಿಸಿದರು. ಕುರಿತು ಚಚರ್ಿಸಿ ಕ್ರಮ ಕೈಗೊಳ್ಳಲಾಗುವುದೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ, ಗಣ್ಯರಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡುವದರ ಜೊತೆಗೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಗೆ ಹಳೆ ಬಾಗಲಕೋಟೆಯಿಂದ ನವನಗರಕ್ಕೆ ಬಂದು ಹೋಗಲು ಬಸ್ಸಿನ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಲಾಯಿತು. ಅಲ್ಲದೇ ಜಿಲ್ಲಾಡಳಿತ ಭವನದ ಕಟ್ಟಡ ಸೇರಿದಂತೆ ಜಿಲ್ಲಾಡಳಿತ ಗೃಹ ಕಚೇರಿ, ಕಮೀಶನರ್ ಆರ್&ಆರ್ ಗೃಹ ಕಚೇರಿ, ತಾಲೂಕ ಭವನ ಕಟ್ಟಡಕ್ಕೂ ವಿದ್ಯುತ್ ದೀಪ ಅಲಂಕಾರ ವ್ಯವಸ್ಥೆ ಮಾಡಬೇಕೆಂದರು.

ಮೆರವಣಿಗೆ ಹಾಗೂ ಕಾರ್ಯಕ್ರಮದಲ್ಲಿ ಎಲ್ಲ ಸಕರ್ಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಯಿತು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡರು. ಕಂದಾಯ ಇಲಾಖೆಯ ಎಂ.ಬಿ.ಗುಡೂರ ಕಳೆದ ಸಾಲಿನ ಸಭೆಯ ನಡಾವಳಿಯನ್ನು ಸಭೆಯಲ್ಲಿ ಮಂಡಿಸಿದರು

     ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದಶರ್ಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಎಚ್.ಜಯ, ಆಹಾರ ಇಲಾಖೆಯ ಉಪನಿದರ್ೇಶಕ ಶ್ರೀಶೈಲ ಕಂಕಣವಾಡಿ, ನಗರಾಭಿವೃದ್ದಿ ಕೋಶದ ಯೋಜನಾ ನಿದರ್ೇಶಕ ಗಣಪತಿ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕಿ ಎಂ.ಆರ್.ಕಾಮಾಕ್ಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕಿ ಶಶಿಕಲಾ ಹುಡೇದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕನ್ನಡಪರ ಸಂಘಟನೆಯ ಮುಖ್ಯಸ್ಥರು ಉಪಸ್ಥಿತರಿದ್ದರು