ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಚ: ಸಮಾಜದ ಮುಖಂಡರಿಂದ ಆಕ್ರೋಶ

Lathi Charcha on Panchmasali fighters: Outrage from community leaders

ದೇವರಹಿಪ್ಪರಗಿ 12: ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಎದುರು ಪ್ರತಿಭಟನೆ ಕೈಗೊಂಡ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಬಿಸಿರುವುದು ಸಂವಿಧಾನ ಮತ್ತು ಪ್ರಜಾತಂತ್ರದ ಮೇಲೆ ನಡೆಸಿದ ದೌರ್ಜನ್ಯವಾಗಿದೆ ಎಂದು ತಾಲೂಕ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಗುರುರಾಜ ಆಕಳವಾಡಿ ಸೇರಿದಂತೆ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪಟ್ಟಣದ ಮೊಹರೆ ವೃತ್ತದಿಂದ ಪಂಚಮಸಾಲಿ ಸಮುದಾಯದ ಮುಖಂಡರು ರಸ್ತೆ ಮೂಲಕ ಮೆರವಣಿಗೆಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ದೌರ್ಜನ್ಯ ಖಂಡಿಸಿ ಸಮುದಾಯದ ಹಿರಿಯ ಮುಖಂಡರಾದ ಚನ್ನವೀರ​‍್ಪ ಕುದರಿ, ಮುಖಂಡರುಗಳಾದ  ರಮೇಶ ಮಸಿಬಿನಾಳ, ಸಾಹೇಬಗೌಡ ಸೇರಿದಂತೆ ಹಲವಾರು ಜನ ಮುಖಂಡರು ಮಾತನಾಡಿ,ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿದರು. ಕೂಡಲ ಸಂಗಮದ ಶ್ರೀಗಳ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧ ಎದುರಿನ ರಸ್ತೆಯಲ್ಲಿ ಸಮಾಜದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಮಾಡಿರುವುದು ಅಮಾನವೀಯ, ರಕ್ಷಣೆ ನೀಡಬೇಕಾದ ಸರ್ಕಾರ ಮೃಗೀಯ ವರ್ತನೆ ತೋರಿರುವುದು ಕಾಂಗ್ರೆಸ್ ಸರ್ಕಾರದ ತೊಘಲಕ್ ಆಡಳಿತಕ್ಕೆ ಸಾಕ್ಷಿಯಾಗಿದೆ ಸಮುದಾಯದವರ ಮೇಲೆ ಲಾಠಿ ಏಟಿನ ದೌರ್ಜನ್ಯ ಮತ್ತು ದಬ್ಬಾಳಿಕೆಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು. ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ ಪ್ರತಿಭಟನಾಕಾರರ ಮಾತುಗಳನ್ನು ಆಲಿಸಿದರು. ಪಿಎಸ್‌ಐ ಬಸವರಾಜ ತಿಪ್ಪರಡ್ಡಿ ಹಾಗೂ ಸಿಬ್ಬಂದಿ ವರ್ಗ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಿದ್ದರು.ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳಾದ ಬಾಬುಗೌಡ ಪಾಟೀಲ, ವೀರೇಶ ಕುದುರಿ, ಸುರೇಶ ಉಕಮನಾಳ, ಮಲ್ಕಪ್ಪ ಸುರಗಿಹಳ್ಳಿ,ಮಡುಗೌಡ ಬಿರಾದಾರ, ಸೋಮು ದೇವೂರ,ಹಣಮಂತ್ರಾಯಗೌಡ ಬಿರಾದಾರ, ಮಾಂತೇಶಗೌಡ ಪಾಟೀಲ, ಯಮನೂರಿ ಸಾತಿಹಾಳ, ರಮೇಶ ಮಾಳನೂರ, ಮಲ್ಲು ಹಳಿಮನಿ, ಕಾಸು ವಾಡೇದಮನಿ, ನಾಗರಾಜ ಅವಟಿ ಸೇರಿದಂತೆ ಸಮಾಜದ ಪ್ರಮುಖರು, ಗಣ್ಯರು ಹಾಗೂ ಯುವಕರು ಉಪಸ್ಥಿತರಿದ್ದರು.