ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಣೆಗೆ ಚಾಲನೆ
Launch of free bus pass distribution for students
ಸವದತ್ತಿ 3 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಅಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಣಾ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ವಿಶ್ವಾಸ್ ವೈದ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರದ ಜನಪರ ಯೋಜನೆಗಳನ್ನು ವಿದ್ಯಾರ್ಥಿಗಳು ಸಮರ್ಕವಾಗಿ ಬಳಸಿಕೊಳ್ಳಬೇಕು. ಆರ್ಥಿಕ ಅಡಚಣೆ ಇಲ್ಲದೆ ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.
ಸವದತ್ತಿ ಸಾರಿಗೆ ಘಟಕದ ವ್ಯವಸ್ಥಾಪಕ ಬಿ.ಕೆ. ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಶಕ್ತಿ ಯೋಜನೆಯಡಿ ಸವದತ್ತಿ ಘಟಕದ 1,089, ಮುನವಳ್ಳಿ ಘಟಕದ 687 ಹಾಗೂ ಯರಗಟ್ಟಿ ಘಟಕದ 414 ಅರ್ಹ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಉಚಿತ ಬಸ್ಪಾಸ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನೂ ಬಸ್ಪಾಸ್ ಪಡೆಯದ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿತ ಸಾರಿಗೆ ಡಿಪೋ ಕಚೇರಿಯನ್ನು ಸಂಪರ್ಕಿಸಿ ಪಾಸ್ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಸವರಾಜ ಅಯ್ಯನಗೌಡ್ರ, ಗೀರೀಶ್ ಮುನವಳ್ಳಿ, ಸುರೇಶ್ ತುಪ್ಪದ, ಶಿವಕುಮಾರ್ ರಾಠೋಡ್, ಸಾರಿಗೆ ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 