ಗೃಹಲಕ್ಷ್ಮಿ ಸಂಭ್ರಮ ಪರಿಸರ ಜಾಗೃತಿ ಅಭಿಯಾನಕ್ಕೆ ಚಾಲನೆ
Launch of the 'Gruhalakshmi Sambhrama' environmental awareness campaign
ಸವದತ್ತಿ 19 : ತಾಲೂಕಿನ ಹೂಲಿ ಗ್ರಾಮದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ’ಯ ಯಶಸ್ವಿ ಮೂರು ವರ್ಷಗಳ ಪೂರೈಕೆ ಅಂಗವಾಗಿ ವಿಶೇಷ ಸಂಭ್ರಮಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕು ಪಂಚಾಯತ್ ಸವದತ್ತಿ ಹಾಗೂ ಗ್ರಾಮ ಪಂಚಾಯತ್ ಹೂಲಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವು, ಗಿಡ ನೆಟ್ಟು - ಪರಿಸರ ಬೆಳೆಸೋಣ, ಗೃಹಲಕ್ಷ್ಮಿ ಗೌರವಿಸೋಣ ಎಂಬ ಘೋಷವಾಕ್ಯದಡಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡ ಅಶ್ವಥ್ ವೈದ್ಯ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯು ಕೋಟ್ಯಂತರ ತಾಯಂದಿರ ಆರ್ಥಿಕ ಸ್ವಾತಂತ್ರ್ಯದ ಶಕ್ತಿಯಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ನೀಡಿದ ಅತ್ಯಂತ ಮಹತ್ವದ ಕೊಡುಗೆ ಇದಾಗಿದೆ ಎಂದರು. ಅಲ್ಲದೆ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಸಿರು ಕರ್ನಾಟಕ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಚಿಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶಿವಕುಮಾರ್ ರಾಠೋಡ ಮಾತನಾಡಿ, ಯೋಜನೆಯ ಲಾಭ ಪಡೆದ ಫಲಾನುಭವಿಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ.
ಗಿಡ ನೆಡುವ ಅಭಿಯಾನದ ಮೂಲಕ ಉತ್ತಮ ಸಮಾಜ ನಿರ್ಮಾಣದ ಸಂದೇಶವನ್ನು ಸಾರುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.ಅಶೋಕ ಕುಲಕರ್ಣಿ, ಹಣಮಂತ ಗೊರವನಕೊಳ್ಳ, ಶೇಕಪ್ಪ ಪತ್ರೊಳ್ಳಿ, ಮಲ್ಲಿಕಾರ್ಜುನ ಗೊರಾಬಾಳ, ಸಿದ್ದಣ್ಣ ದಿಡಗನ್ನವರ, ಯಲ್ಲಪ್ಪ ಕಾರ್ಲಕಟ್ಟಿ, ಗೀರೀಶ್ ಮುನವಳ್ಳಿ, ಗುರುನಾಥ್ ಸುರಕೋಡ, ಕಲ್ಮೇಶ ಮಾಳನ್ನವರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಂ.ಐ. ಕಳ್ಳಿ, ಸೇರಿದಂತೆ ಗ್ರಾಮದ ಹಿರಿಯ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 