ವ್ಯಸನಮುಕ್ತ ಪ್ರತಿಜ್ಞಾ ಅಭಿಯಾನಕ್ಕೆ ಚಾಲನೆ
Launch of the addiction-free pledge campaign
ಗದಗ, ಜು. 30: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೆಡಿಕಲ್ ವಿಂಗ್ ವತಿಯಿಂದ ವ್ಯಸನಮುಕ್ತ ಪ್ರತಿಜ್ಞಾ ಅಭಿಯಾನವನ್ನು ಆಯೋಜಿಸಲಾಯಿತು. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ‘ನಶಾ ಮುಕ್ತ ಭಾರತ ಅಭಿಯಾನ’ ಹಾಗೂ ಗೃಹ ಸಚಿವಾಲಯದ ಅಧೀನದಲ್ಲಿರುವ **ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)**ಯ ‘ಮಿಷನ್ ಸ್ಪಂದನ್’ ಅಭಿಯಾನದ ಅಂಗವಾಗಿ ಕಾರ್ಯಕ್ರಮ ನಡೆಯಿತು.
ನಗರದ ಬಸವೇಶ್ವರ ನಗರದಲ್ಲಿರುವ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ಅಕ್ಕ ಅವರು, ಉತ್ತಮ ಆರೋಗ್ಯ, ಮಾನಸಿಕ ಶಾಂತಿ ಹಾಗೂ ಆರೋಗ್ಯಕರ ಜೀವನಶೈಲಿಯ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಮದ್ಯ, ಮಾದಕ ವಸ್ತುಗಳು ಮಾತ್ರವಲ್ಲದೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಂತಹ ವ್ಯಸನಗಳಿಂದಲೂ ದೂರವಿರಬೇಕೆಂದು ಸಲಹೆ ನೀಡಿದರು. ಆಗಸ್ಟ್ 20ರವರೆಗೆ ಶಾಲೆ, ಕಾಲೇಜು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ವ್ಯಸನಮುಕ್ತ ಪ್ರತಿಜ್ಞಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ನವಜ್ಯೋತಿ ಸಮಗ್ರ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಬಸವರಾಜ ಬೇವಿನಮರದ ಮಾತನಾಡಿ, ಕಳೆದ 11-12 ವರ್ಷಗಳಲ್ಲಿ ಉತ್ತರ ಕರ್ನಾಟಕದ ಸುಮಾರು 29 ಸಾವಿರಕ್ಕೂ ಹೆಚ್ಚು ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ತಿಳಿಸಿದರು. ವ್ಯಸನಕ್ಕೊಳಗಾದವರಿಗೆ ಸಮಾಲೋಚನೆ, ವೈದ್ಯಕೀಯ ಚಿಕಿತ್ಸೆ ಹಾಗೂ ಪುನರ್ವಸತಿ ಸೇವೆಗಳನ್ನು ನಿರಂತರವಾಗಿ ನೀಡಲಾಗುತ್ತಿದೆ ಎಂದರು.
ಈಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಸಂತೋಜಿ ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಹಾಗೂ ದೂರದರ್ಶನದ ಅತಿಯಾದ ಬಳಕೆಯನ್ನು ಪೋಷಕರು ನಿಯಂತ್ರಿಸಬೇಕು. ವ್ಯಸನಮುಕ್ತ ಭಾರತ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಈಶ್ವರ ಸೇವಾ ಸಂಘದ ಅಧ್ಯಕ್ಷ ಚೆನ್ನಬಸಪ್ಪ ಅಕ್ಕಿ, ನಿವೃತ್ತ ಶಿಕ್ಷಕ ಕೆ.ಎ. ಮೂಲಿಮನಿ, ಶ್ರೀಮತಿ ಸಂಕ್ರಮ ಮುದುಗಲ್, ಶ್ವೇತಾ ಕೊಳೆಕಾರ್ ಸೇರಿದಂತೆ ಬ್ರಹ್ಮಕುಮಾರಿಯರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಬ್ರಹ್ಮಕುಮಾರಿ ರೇಖಾ ಸ್ವಾಗತಿಸಿ, ಬ್ರಹ್ಮಕುಮಾರಿ ಸಾವಿತ್ರಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 