ಅದ್ದೂರಿ ಮದುವೆ: ಬಿಜೆಪಿ ಮುಖಂಡನ ವಿರುದ್ದ ಪ್ರಕರಣ ದಾಖಲು
ಬೆಳಗಾವಿ, ಜುಲೈ 14: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಗನ ಅದ್ಧೂರಿ ಮದುವೆ ಮಾಡಿದ್ದ ಬಿಜೆಪಿ ಮುಖಂಡ ದಯಾನಂದ ವಂಟಮುರಿ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.
ಸೋಮವಾರ ಕೊವಿಡ್-19 ನಿಯಮಗಳನ್ನು ಗಾಳಿಗೆ ತೂರಿ ಮಗನ ಮದುವೆ ಮಾಡಿದ್ದ ದಯಾನಂದ ವಂಟಮುರಿ, ಮಹಾರಾಷ್ಟ್ರದಿಂದ ಸಾಕಷ್ಟು ಜನರನ್ನು ಮದುವೆಗೆ ಕರೆಯಿಸಿದ್ದರು. ಮದುವೆ ಜೊತೆ ಸಂಜೆ ಗ್ರಾಮದಲ್ಲಿ ವಧು-ವರನ ಅದ್ಧೂರಿ ಮೆರವಣಿಗೆ ಮಾಡಿದ್ದರು.
500ಕ್ಕೂ ಹೆಚ್ಚು ಜನರನ್ನು ಮದುವೆಯಲ್ಲಿ ಸೇರಿದ್ದು, ಮಾಸ್ಕ್ ಬಳಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್-19 ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 188, 269, 270, ಎಪಿಡೆಮಿಕ್ ಡಿಸೀಸ್ ಕಾಯ್ದೆ, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ ಅಡಿ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಶಿವಾನಂದ ಗುಡಗನಟ್ಟಿ ಪ್ರಕರಣ ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಮದಹಳ್ಳಿ ಹಾಗೂ ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರು 4 ಕಿ.ಮೀ ಅಂತರದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಈ ರೀತಿ ಅದ್ಧೂರಿ ಮದುವೆ ಮಾಡಿದ್ದು ಜನರಲ್ಲಿ ಆತಂಕಕ್ಕೆ ಹೆಚ್ಚಾಗುವಂತೆ ಮಾಡಿದೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 