ಪಡಿತರ ವಿತರಣಾ ಕೇಂದ್ರಗಳಿಗೆ ಶಾಸಕ ವಿರೂಪಾಕ್ಷಪ್ಪ ಭೇಟಿ

ಬ್ಯಾಡಗಿ06: ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿನ ಎರಡು ಪಡಿತರ ವಿತರಣಾ ಕೇಂದ್ರಗಳಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ ಪಡಿತರ  ವಿತರಣೆಯಲ್ಲಾಗುತ್ತಿರುವ ಸಮಸ್ಯೆಗಳ ಕುರಿತು ಚಚರ್ಿಸಿ  ಪಡಿತರ ವಿತರಣಾ ಕೇಂದ್ರಗಳ ಸಿಬ್ಬಂದಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸೂಕ್ತ ವ್ಯವಸ್ಥೆಯೊಂದಿಗೆ ಪಡಿತರವನ್ನು ವಿತರಣೆ ಮಾಡಲು ಸೂಚಿಸಿದರು. 

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡ ಶಶಿಧರಸ್ವಾಮಿ ಛತ್ರದಮಠ, ನಿವೃತ್ತ ಗ್ರಾ.ಪಂ. ಕಾರ್ಯದಶರ್ಿ ಕೆ. ಎಂ. ಪಾಟೀಲ, ಶಾಸಕರ ಆಪ್ತ ಸಹಾಯಕ ಬಸವರಾಜ ಕುಲಕಣರ್ಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.