ಬ್ಯಾಡಗಿ 22: ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷರು ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಹಿರಿಯ ವಕೀಲರಾದ ಸದಾಶಿವ ರೆಡ್ಡಿ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ, ವಕೀಲರ ಸಂಘದ ಬ್ಯಾಡಗಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಪಟ್ಟಣದಲ್ಲಿ ಕಾಲ್ನಡಿಗೆ ಮೂಲಕ ಮೌನ ಮೆರವಣಿಗೆ ನಡೆಸಿದರು.
ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರಕ್ಕೆ, ಗೃಹ ಮಂತ್ರಿಗಳು ಕರ್ನಾಟಕ ಸರ್ಕಾರ ಇವರಿಗೆ ಮನವಿ ಸಲ್ಲಿಸಿದರು.
ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಶೀಡೆನೂರ ಮಾತನಾಡಿ, ಸದಾಶಿವ ರೆಡ್ಡಿಯವರ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ರಾಜ್ಯ ಪರಿಷತ್ತಿನ ನಿರ್ಣಯದಂತೆ ಕೆಂಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ವಕೀಲರ ಮೇಲೆ ನಡೆಯುವ ದೌರ್ಜನ್ಯ, ಕಿರುಕುಳ ಕಾನೂನು ವ್ಯವಸ್ಥೆಯ ಮೇಲೆ ನಡೆದ ದಾಳಿಯಾಗಿದ್ದು, ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆಗಾರರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು, ವಕೀಲರ ಮೇಲೆ ಹಲ್ಲೆ ನಡೆಸುವವರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.ಹಿರಿಯ ವಕೀಲರಾದ ಪಿ ಆರ್ ಮಠದ ಹಲ್ಲೆ ಮಾಡಿದ್ದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಹಾಗೂ ವಕೀಲ ಸದಾಶಿವ ರೆಡ್ಡಿ ರವರಿಗೆ ಸೂಕ್ತ ನ್ಯಾಯ ಹಾಗೂ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಕೀಲರ ಸಂಘದಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಪಿ ಸಿ ಸಿಗಿಹಳ್ಳಿ, ಎಂ ಜೆ ಮುಲ್ಲಾ, ಎಂಎಫ್ ಮುಳಗುಂದ. ಏನ್ ಎಂ ಹುಬ್ಬಳ್ಳಿ ಎನ್‌ಎಸ್ ಬಟ್ಟಲಕಟ್ಟಿ. ಎಚ್ ಎಸ್ ಜಾದವ್ ,ಎಸ್ ಎನ್ ಬಾರ್ಕಿ, ಹಾಗು ವಕೀಲರ ಸಂಘದ ಉಪಾಧ್ಯಕ್ಷರಾದ ಜಿಬಿ ಎಲಗಚ್ ಕಾರ್ಯದರ್ಶಿಗಳ ಎಚ್ ಜಿ ಮುಳಗುಂದ. ಸಹ ಕಾರ್ಯದರ್ಶಿಗಳಾದ ಎಂ ಎಸ್ ಕುಮಾರ್. ಸಂಘದ ಸದಸ್ಯರು ಹಾಗೂ ಎಲ್ಲ ವಕೀಲರು ಉಪಸ್ಥಿತರಿದ್ದರು.