ಲೀಡ್ ಬ್ಯಾಂಕ ಸಲಹಾ ಸಮಿತಿ ಸಭೆ: ಕೈಗಾರಿಕೋದ್ಯಮಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಿ: ಸಂಸದ ಬೊಮ್ಮಯಿ
Lead Bank Advisory Committee meeting: Provide appropriate guidance to industrialists: MP Bommai
ಗದಗ 17: ಸಣ್ಣ ಕೈಗಾರಿಕೆ ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್ನವರು ಸಾಲ ಒದಗಿಸುವಲ್ಲಿ ಸೂಕ್ತಕ್ರಮ ವಹಿಸಿ ಮಾರ್ಗದರ್ಶನ ನೀಡಬೇಕು. ಕೈಗಾರಿಕೆ ಕ್ಷೇತ್ರದಲ್ಲಿ ಸಮರ್ಕ ಪ್ರಮಾಣದಲ್ಲಿ ಸಾಲ ನೀಡಿಕೆಯಾದರೆ ಇದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಯಾಗಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳೂ ಸಹ ಲಭಿಸಲಿವೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಲೀಡ್ ಬ್ಯಾಂಕ್ದ ( ಡಿಸಿಸಿ ಮತ್ತು ಡಿಎಲ್‌ಆರ್ಸಿ) ಸಲಹಾ ಸಮಿತಿ ಸಭೆ ಮತ್ತು ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳು ಪ್ರಮುಖ ಪಾತ್ರ ವಹಿಸುತ್ತವೆ. ಬ್ಯಾಂಕ್ ನವರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿದರೆ ಜಿಲ್ಲೆಯು ಶೀಘ್ರವಾಗಿ ಅಬಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ. ಸಣ್ಣ ಕೈಗಾರಿಕೆ ಸೇರಿದಂತೆ ವಿವಿಧ ಕೈಗಾರಿಕೆ ಉದ್ದಿಮೆಗಳಿಗೆ ಬ್ಯಾಂಕ್ನವರು ಸಾಲ ನೀಡುವ ಪ್ರಕ್ರಿಯೆಯಲ್ಲಿ ಏನಾದರೂ ಸಮಸ್ಯೆಗಳೇನಾದರೂ ಎದುರಾದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳೊಂದಿಗೆ ಸೂಕ್ತ ರೀತಿಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದರು.ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಬ್ಯಾಂಕ್ಗಳ ಮುಖಾಂತರ ನಿಗದಿತ ಕಾಲಮಿತಿಯಲ್ಲಿಯೇ ದೊರಕಿಸಿದರೆ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಬಡಜನರು ಹಾಗೂ ರೈತರಿಗೆ ಬ್ಯಾಂಕ್ನವರ ಸರಿಯಾದ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಗದಗ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ರೈತರಿಗೆ ಸಾಲ ನೀಡುವಾಗ ವಿನಾಕಾರಣ ವಿಳಂಬ ಮಾಡಬಾರದು. ಗದಗ ಜಿಲ್ಲೆಯಲ್ಲಿ ಆಹಾರ ಸಂಸ್ಕರಣಾ ಘಟಕಗಳಿಗೆ ಹೆಚ್ಚಿನ ಪ್ರೋತ್ಸಾಹವಿದೆ. ಈ ನಿಟ್ಟಿನಲ್ಲಿ ಆಯಾ ಸಂಬಂಧಿತ ಇಲಾಖೆಯವರೊಂದಿಗೆ ಯೋಜನೆಯ ಅನುಷ್ಟಾನಕ್ಕೆ ಪೂರಕವಾಗುವಂತೆ ಸಭೆ ಜರುಗಿಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಖಾತೆಗೆ ಡಿಬಿಟಿ ಮುಖಾಂತರ ಹಣ ಜಮೆಯಾಗುತ್ತಿದ್ದರೆ ಅಂತಹ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್ ನಿಂದ ಸಾಲ ನೀಡಿಕೆಯ ಹಣದೊಂದಿಗೆ ಹೊಂದಾಣಿಕೆ ಮಾಡಬಾರದು.ಬ್ಯಾಂಕ್ ನಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯವ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಂದಾಗ ವಿನಾ ಕಾರಣ ಅರ್ಜಿಯನ್ನು ತಿರಸ್ಕರಿಸದೇ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಅರ್ಜಿಯನ್ನು ಸ್ವೀಕರಿಸಿ ಜಿಲ್ಲೆಯ ಆರ್ಥಿಕ ಪ್ರಗತಿಗೆ ಬ್ಯಾಂಕ್ ಅಧಿಕಾರಿಗಳು ಕಾರ್ಯನಿರ್ವಹಿಸುವಂತಾಗಲಿ ಎಂದರು.ಬ್ಯಾಂಕ್ನವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಿದರೆ ಯೊಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ. ಕೃಷಿ ಕ್ಷೇತ್ರಕ್ಕೆ ಸಾಲ ನೀಡಿಕೆಗೆ ಹೆಚ್ಚು ಒತ್ತು ನೀಡಬೇಕೆಂದು ತಿಳಿಸಿದ ಸಂಸದವರು ( ಎಂಎಸ್‌ಎಂಇ ) ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ನೀಡಿಕೆಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ, ಬ್ಯಾಂಕ್ ನವರಿಗೆ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಸಾಲ ನೀಡಿಕೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದರೆ ಜಿಲ್ಲಾಡಳಿತ ಮತ್ತು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿಸಿ.ಎನ್.ಶ್ರೀಧರ್, ಎಸ್.ಬಿ.ಐ ಆರಿ್ಬ.ಓ ಪ್ರಾದೇಶಿಕ ವ್ಯವಸ್ಥಾಪಕ ನಾಗಸುಬ್ಬಾ ರೆಡ್ಡಿ ಬಿ, ಆರಿ್ಬ.ಐ ದ ಎಜಿಎಂ (ಎಲ್.ಡಿ.ಓ) ಸೂರಜ್ ಎಸ್, ನಬಾರ್ಡ ದ ಎ.ಜಿ.ಎಂ.( ಡಿ.ಡಿ.ಎಂ) ಮಯೂರ ಕಾಂಬಳೆ, ಜಿ.ಪಂ. ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ್ರ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್, ಜಿ.ಪಂ. ಯೋಜನಾಧಿಕಾರಿ ಚಳಗೇರಿ, ಮಹಿಳಾ ಮತ್ತು ಮಕ್ಕಳ ಇಲಾಖೆ ನಿರುಪಣಾಧಿಕಾರಿ ರಾಧಾ ಮಣ್ಣೂರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಬ್ಯಾಂಕ್ನ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 