ಕೃಷಿ ಮತ್ತು ಗುಡಿ ಕೈಗಾರಿಕೆ ಕುರಿತು ಉಪನ್ಯಾಸ
Lecture on Agriculture and Cottage Industries
ಹೂವಿನ ಹಡಗಲಿ, ಜು.31: ಭಾರತೀಯ ಸಂಸ್ಕೃತಿಯಲ್ಲಿ ಕೃಷಿ ಕೇವಲ ಹೊಟ್ಟೆಪಾಡಿನ ವೃತ್ತಿಯಲ್ಲ, ಅದು ಜೀವನ ಪದ್ಧತಿ ಹಾಗೂ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಎಂದು ಶಿಕ್ಷಕ ಎಂ. ಶಿವಪ್ರಕಾಶ್ ಅಭಿಪ್ರಾಯಪಟ್ಟರು.
ತಾಲೂಕಿನ ನಾಗತಿ ಬಸಾಪುರದ ಟಿ.ಎಂ. ಶಿವಶಂಕರಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ವಿವಿಧ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ "ಕೃಷಿ ಮತ್ತು ಗುಡಿ ಕೈಗಾರಿಕೆ" ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.
ಕೃಷಿ ದೇಶದ ಆಹಾರ ಭದ್ರತೆಗೆ ಮಾತ್ರವಲ್ಲದೆ ಕೈಗಾರಿಕೆಗಳಿಗೆ ಅಗತ್ಯವಾದ ಕಚ್ಚಾ ವಸ್ತುಗಳನ್ನು ಒದಗಿಸುವ ಪ್ರಮುಖ ಕ್ಷೇತ್ರವಾಗಿದೆ. ಕೇವಲ ಏಕಬೆಳೆ ಪದ್ಧತಿಗೆ ಸೀಮಿತವಾಗದೆ, ವಾಣಿಜ್ಯ ಬೆಳೆಗಳೊಂದಿಗೆ ಕೃಷಿಯಲ್ಲಿ ಆಧುನಿಕತೆ, ಸಂಸ್ಕೃತಿ ಹಾಗೂ ಮೌಲ್ಯಗಳ ಸಮನ್ವಯ ಸಾಧಿಸಿದರೆ ರೈತರು ಇನ್ನಷ್ಟು ಯಶಸ್ಸು ಕಾಣಬಹುದು ಎಂದು ಹೇಳಿದರು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಗಳ ಉದ್ಘಾಟಿಸಿ ಮಾತನಾಡಿದರು. ಹರಪನಹಳ್ಳಿ ಟಿಎಂಎಇ ಶಿಕ್ಷಕರ ತರಬೇತಿ ಕಾಲೇಜಿನ ಪ್ರಾಚಾರ್ಯ ಎಚ್.ಎಂ. ಮಲ್ಲಿಕಾರ್ಜುನ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ತಾಲೂಕು ಅಧ್ಯಕ್ಷ ಟಿ. ವೀರೇಂದ್ರ ಪಾಟೀಲ ವಹಿಸಿದ್ದರು. ಶಿಕ್ಷಕರಾದ ಕಂಠ ಪ್ರಕಾಶ್, ಎಸ್ಡಿಎಂಸಿ ಅಧ್ಯಕ್ಷ ಎಚ್. ಮಲ್ಲನಗೌಡ, ನಾಗೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಜ್ಜಿ ಇಂದುಶ್ರೀ ಪ್ರಾರ್ಥನೆ ನೆರವೇರಿಸಿದರು. ಐ.ಎಂ. ಸುನೀತಾ ಸ್ವಾಗತಿಸಿದರು. ಕಸಾಪ ಕಾರ್ಯದರ್ಶಿ ಎ.ಎಂ. ಚನ್ನವೀರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಂದ್ರ ವಂದಿಸಿದರು. ಎಲ್.ಎಂ. ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 