ಜೀವನದಲ್ಲಿ ಸಹನಶೀಲತೆ ಕುರಿತು ಉಪನ್ಯಾಸ ನಾಳೆ
Lecture on tolerance in life tomorrow
ಲೋಕದರ್ಶನ ವರದಿ
ಧಾರವಾಡ 01 : ಕರ್ನಾಟಕ ವಿದ್ಯಾವರ್ಧಕ ಸಂಘವು ದಿ. ವಿಶಾಲ ರಾಜಶೇಖರ ಹಂಚಿನಮನಿ ಸ್ಮರಣಾರ್ಥ ಆಗಸ್ಟ್ 2ರಂದು ಸಂಜೆ 6 ಗಂಟೆಗೆ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ’ಜೀವನದಲ್ಲಿ ಸಹನಶೀಲತೆ’ ವಿಷಯ ಕುರಿತು ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ಧಾರವಾಡದ ಮೈಂಡ್ ವೇವ್ ನಿರ್ದೇಶಕ ಮಹೇಶ್ ಮಾಶಾಳ ಅವರು ಉಪನ್ಯಾಸ ನೀಡಲಿದ್ದು, ಹಂಗರಕಿಯ ಮಾಜಿ ಶಾಸಕ ಎ.ಬಿ. ದೇಸಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.
2025-26ನೇ ಸಾಲಿನ ಎಂ.ಕಾಂ ಪರೀಕ್ಷೆಯಲ್ಲಿ ಹುಬ್ಬಳ್ಳಿಯ ಕೆ.ಎಚ್. ಪಾಟೀಲ ಕಾಮರ್ಸ್ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕುಮಾರಿ ವಾಸಂತಿ ಗಿರಿಸಾಗರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಸಂಘದ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 