ಏಪ್ರಿಲ್ 5 ರಂದು ಸ್ವಾಮಿ ನಿರ್ಭಯಾನಂದ ಸರಸ್ವತಿಗಳವರ ಉಪನ್ಯಾಸ ಕಾರ್ಯಕ್ರಮ
Lecture program by Swami Nirbhayananda Saraswati on April 5th
ಲೋಕದರ್ಶನ ವರದಿ
ಬಳ್ಳಾರಿ 02: ಇಲ್ಲಿನ ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ಏಪ್ರಿಲ್ 5 ರಂದು ಸಂಜೆ 6 ಗಂಟೆಗೆ ವಿಜಯಪುರ-ಗದಗ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರಿಂದ ಸಿಡಿಲ ಸನ್ಯಾಸಿ ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಕುರಿತಾದ ವಿವೇಕ ಮಂಟಪ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಜೀರ್ರ ಗುರುಮೂರ್ತಿ ಹಾಗೂ ರಾಮದೂತ ಕಂಪ್ಯೂಟರ್ಸ್ನ ಮಾಲೀಕ ಕೆ.ಎಸ್.ಬಾಬು ಅವರು ಅತಿಥಿಗಳಾಗಿ ಉಪಸ್ಥಿತರಿರುವರು.
ಉಪನ್ಯಾಸಕ್ಕೂ ಮುನ್ನ ಬೆಳಗಲ್ಲು ಹನುಮಂತ ಹಾಗೂ ಬೆಳಗಲ್ಲು ರೇಖಾ ಅವರಿಂದ ಭಕ್ತಿ ಸಂಗೀತ ನಡೆಯಲಿದೆ. ಮುದ್ದಟನೂರು ಎಚ್.ತಿಪ್ಪೇಸ್ವಾಮಿ ಹಾರ್ಮೋನಿಯಂ, ಯೋಗೇಶ್ ಸಂಗನಕಲ್ಲು ತಬಲಾ ಸಾಥ್ ನೀಡುವರು. 2015ರಿಂದ ಸ್ವಾಮಿ ನಿರ್ಭಯಾನಂದ ಶ್ರೀಗಳು ಬಳ್ಳಾರಿಗೆ ಆಗಮಿಸಿ ಉಪನ್ಯಾಸ ನೀಡುತ್ತಿದ್ದು, ಈ ಭಾಗದ ಭಕ್ತರ ಆಪೇಕ್ಷೆಯ ಮೇರೆಗೆ ಪ್ರತಿ ತಿಂಗಳ ಮೊದಲ ಭಾನುವಾರ ನಗರದ ಪಾಂಚಜನ್ಯ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ ಜೀವನ ಸಂದೇಶಗಳ ಕುರಿತು ವಿವೇಕ ಲೀಲಾಮೃತ’ ಉಪನ್ಯಾಸ ನೀಡಲಿದ್ದಾರೆ ಎಂದು ವಿವೇಕ ಮಂಟಪ ಸಂಯೋಜಕ ಪ್ರಭುದೇವ ಕಪ್ಪಗಲ್ಲು ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 