ದಿ. 16 ರಂದು ಸರಣಿ ಉಪನ್ಯಾಸ ಮಾಲೆ
Lecture series on 16th
ಧಾರವಾಡ 13: ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ದಿ. 16 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬೇಂದ್ರೆ ಭವನದಲ್ಲಿ ನಾಕುತಂತಿ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಸಂದ ಸುವರ್ಣ ಮಹೋತ್ಸವದ ನಿಮಿತ್ತ ಏರಿ್ಡಸಿರುವ ಸರಣಿ ಉಪನ್ಯಾಸ ಮಾಲೆಯಲ್ಲಿ ಹಿರಿಯ ಸಾಹಿತಿ, ಲೇಖಕರಾದ ಆನಂದ ಝುಂಜರವಾಡ ಅವರು “ನಾಕುತಂತಿ : ಕಲೆ ಹಾಗೂ ತತ್ವಗಳ ಸಖೀಗೀತ” ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಅಧ್ಯಕ್ಷತೆ ವಹಿಸುವರು. ಸರಣಿ ಉಪನ್ಯಾಸ ಮಾಲೆಯ ಸಂಚಾಲಕರು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧ್ಯಯನಾಂಗದ ನಿರ್ದೇಶಕರಾದ ಪ್ರೊ.ಬಸವರಾಜ ಡೋಣೂರ ಹಾಗೂ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ನೀಲಕ್ಕ ಸಿ. ಪಾಟೀಲ ಅವರು ಉಪಸ್ಥಿತರಿರುವರು ಎಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸೊಲಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 