ಬಾಲಕಾರ್ಮಿಕ ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬಾಗಲಕೋಟೆ: ನವನಗರದ ಆಶ್ರಯ ಕಾಲೋನಿ ಸಮುದಾಯ ಭವನದಲ್ಲಿ ಬಾಲ್ಯಾವಸ್ಥೆಯ, ಕಿಶೋರಾವಸ್ಥೆಯ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ ಕಾಯ್ದೆ, 2016ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಇತ್ತೀಚೆಗೆ ಜರುಗಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಶಿಕ್ಷಣ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಜರುಗಿದ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಉದ್ಘಾಟಿಸಿ ಮಾತನಾಡಿದ ಅವರು 14 ವರ್ಷದೊಳಗಿನ ಮಕ್ಕಳನ್ನು ಮನೆ, ಹೋಟಲ್ ಹಾಗೂ ಕಾರ್ಖಾನೆ  ಸೇರಿದಂತೆ ಯಾವುದೇ ಅಪಾಯಕಾರಿ ವೃತ್ತಿಗಳಲ್ಲಿ ಕೆಲಸಕ್ಕಿಟ್ಟುಕೊಳ್ಳುವುದು ಅಪರಾಧವಾಗಿದ್ದು, ಅಂತಹ ಮೊದಲ ಅಪಾರಧಕ್ಕೆ ಮಾಲಿಕರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20 ಸಾವಿರ ರೂ.ದಿಂದ 50 ಸಾವಿರ ರೂ.ಗಳ ವರೆಗೆ ದಂಡ ಅಥವಾ ಎರಡು ಶಿಕ್ಷೆಗೆ ಒಳಪಡಿಸಬಹುದಾಗಿದೆ ಎಂದರು.

ಸಿ.ಪಿ.ಐ ಆಯ್.ಆರ್.ಪಟ್ಟಣಶೆಟ್ಟಿ ಮಾತನಾಡಿ ವಾಂಬೆ ಕಾಲೋನಿಯಲ್ಲಿ ಅತೀ ಹೆಚ್ಚಿನ ಜನರು ಬಡತನದಿಂದ ಹಾಗೂ ದಿನಗೂಲಿ ಕೆಲಸ ಮಾಡುವ ಕಾರ್ಮಿಕರು ಕಂಡು ಬರುತ್ತಿದ್ದು, ಇಂತಹ ಸ್ಥಳದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವದರಿಂದ ಕಾನೂನುಗಳ ಅರಿವು ಮೂಡಿಸಲು ಸಾಧ್ಯವಾಗುತ್ತದೆ. ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೊಳಿಸಲು ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದೆಂದರು. ಸರಕಾರ ಶಿಕ್ಷಣಕ್ಕೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡುತ್ತಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಹೇಳಿದರು.

ಕಾರ್ಮಿಕನೀರಿಕ್ಷಕರಾಧ ಅಶೋಕ ಒಡೆಯರ ಮಾತನಾಡಿ ಮಕ್ಕಳನ್ನು ಕೆಲಸಕ್ಕೆ ಹಚ್ಚುವುದು ಅಪರಾಧ, ಬಾಲ ಕಾರ್ಮಿಕ ಪದ್ದತಿಯನ್ನು ಜನ ವಿರೋಧಿಸಬೇಕು. ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಮುಂದಾಗಬೇಕೆಂದರು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಕಾನೂನಿನಲ್ಲಿ ಇಲಾಖೆಯು ಕಠಿಣವಾದ ಶಿಕ್ಷೆ ನೀಡಲಾಗುವುದು ಎಂದು ಹೇಳಿದರು. ಪೋಷಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯವನ್ನು ಉತ್ತಮ ಪಡಿಸುವತ್ತ ಚಿಂತನೆ ಮಾಡಬೇಕು ಎಂದರು. ಅಲ್ಲದೆ ಸಮಾಜದಲ್ಲಿ ಅವರನ್ನು ಸತ್ಪ್ರಜೆಗಳನ್ನಾಗಿಸಬೇಕು ಹೊರತು ಬಾಲಕಾರ್ಮಿಕರನ್ನಾಗಿ ಮಾಡದಿರಲು ತಿಳಿಸಿದರು. 

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಗುಲಾಬ ನಧಾಪ್, ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್.ಜಾಧವ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಅಂಬಾಜಿ ಜೋಷಿ, ಸೀಮಾಕೌಸರ್ ನದಾಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಜಿಲ್ಲಾ ಬಾಲಕಾಮರ್ಿಕ ಯೋಜನಾ ಸಂಸ್ಥೆಯ ಯೋಜನಾ ನಿದರ್ೇಶಕ ಸ್ವಾಗತಿಸಿ ನಿರೂಪಿಸಿದರು.